23 ಪ್ರಕರಣಗಳಲ್ಲಿ ಬೇಕಗಿದ್ದ ಮೋಸ್ಟ್ ವಾಟೆಂಡ್ ವಾರಂಟ್ ಆರೋಪಿಯನ್ನು ಪೊಲೀಸರು ಕಾರ್ಯಚರಣೆ ನಡೆಸಿ ಬಂಧಿಸಿದ್ದಾರೆ.
ಕೃಷ್ಣಾಪುರ, ಕಾಟಿಪಳ್ಳ ಗ್ರಾಮದ ನಿವಾಸಿ ಅಜರುದ್ದೀನ್ ಅಲಿಯಾಸ್ ಅಜರ್ (29) ಬಂಧಿತ ಆರೋಪಿಯಾಗಿದ್ದಾನೆ. ಈತನ ವಿರುದ್ಧ ಮಂಗಳೂರು ನಗರ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 23 ಪ್ರಕರಣಗಳು ಇದ್ದು, ಎಲ್ಲವೂ ಜಾಮೀನು ರಹಿತ ವಾರಂಟ್‌ಗಳಾಗಿದೆ.
ಇನ್ನೂ ಈ ಆರೋಪಿಯನ್ನ ಮಂಗಳೂರು ಪೊಲೀಸ್ ಆಯುಕ್ತರ ಆದೇಶದ ಮೇರೆಗೆ, ಮಂಗಳೂರು ಉತ್ತರ ಉಪವಿಭಾಗದ ಸಹಾಯಕ ಆಯುಕ್ತರಾದ ಮನೋಜ್ ಕುಮಾರ್‌ರವರ ನಿರ್ದೇಶನದಂತೆ, ಸುರತ್ಕಲ್ ಪೊಲೀಸ್ ಠಾಣೆಯ ನಿರೀಕ್ಷಕರಾದ ಮಹೇಶ್ ಪ್ರಸಾದ್ ನೇತೃತ್ವದಲ್ಲಿ, ಉಪನಿರೀಕ್ಷಕರಾದ ಮಲ್ಲಿಕಾರ್ಜುನ್, ಸಿಬಂಧಿಗಳಾದ ಅಜಿತ್ ಮ್ಯಾಥ್, ಮಣಿಕಂಠ, ಕಾರ್ತಿಕ್ ಅವರ ತಂಡ ಬಂಧಿಸಿದ್ದಾರೆ.