ಮಡಿಕೇರಿ : ಮನೆಯಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಉಂಗುರ ನುಂಗಿದ್ದ ಎಂಟು ತಿಂಗಳ ಮಗು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕರಡಿಗೋಡು ಗ್ರಾಮದಲ್ಲಿ ನಡೆದಿದೆ.
ಉಂಗುರ ನುಂಗಿದ ಬಳಿಕ ಉಸಿರಾಟದ ಸಮಸ್ಯೆಯಿಂದ ಅಸ್ವಸ್ಥವಾಗಿದ್ದ ಮಗುವನ್ನು ತಕ್ಷಣ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದರೂ ಅಲ್ಲಿ ಸಾಧ್ಯವಾಗದೇ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.
ಮಗುವಿನ ಆರೋಗ್ಯ ಪರಿಶೀಲನೆ ನಡೆಸಿದ ವೈದ್ಯರ ತಂಡ ಸತತವಾಗಿ ಮೂರು ಗಂಟೆಗಳ ಕಾಲ ಶಸ್ತ್ರ ಚಿಕಿತ್ಸೆ ನಡೆಸಿ ಉಂಗುರವನ್ನು ಹೊರತೆಗೆಯಲ್ಲಿ ಯಶಸ್ವಿಯಾಗಿದ್ದರು.
ಆದರೆ ಮುಂಜಾನೆ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೆ ಮಗು ಕೊನೆಯುಸಿರೆಳೆದಿದೆ