Monday, November 25, 2024
ಸುದ್ದಿ

ಕಂಟಕವಾಯ್ತು ಮಾನಹಾನಿ ಪ್ರಕರಣ..; ಜೈಲು ಶಿಕ್ಷೆ ಬೆನ್ನಲ್ಲೇ ರಾಹುಲ್ ಗಾಂಧಿಗೆ ಅಘಾತ ; ಲೋಕಸಭಾ ಸದಸ್ಯ ಸ್ಥಾನದಿಂದ ವಜಾ..! –ಕಹಳೆ ನ್ಯೂಸ್

ಗುಜರಾತ್‌ನ ಸೂರತ್ ಕೋರ್ಟ್ ರಾಹುಲ್ ಗಾಂಧಿ ಅವರನ್ನು ದೋಷಿ ಎಂದು ತೀರ್ಪು ನೀಡಿದ ಹಿನ್ನೆಲೆಯಲ್ಲಿ ಲೋಕಸಭಾ ಸ್ಪೀಕರ್ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲು ಆದೇಶ ಹೊರಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಸಂಸದನಾಗಿ ಆಯ್ಕೆಯಾಗಿದ್ದ ರಾಹುಲ್ ಗಾಂಧಿ ಅವರು 2019ರಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡುತ್ತಿದ್ದ ವೇಳೆ ‘ಹುಡುಕಿದರೆ ಇನ್ನೊಂದಷ್ಟು ಜನ ಮೋದಿಗಳು ಸಿಗುತ್ತಾರೆ. ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಹೀಗೆ ಎಲ್ಲಾ ಕಳ್ಳರ ಹೆಸರು ಮೋದಿ ಅಂತಾನೆ ಬರುತ್ತೆ’ ಎಂದು ಹೇಳಿದ್ರು. ರಾಹುಲ್ ಗಾಂಧಿ ಹೇಳಿಕೆ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿ ಗುಜರಾತ್‌ನಲ್ಲಿ ಪ್ರಕರಣವನ್ನೂ ದಾಖಲಿಸಲಾಗಿತ್ತು.

ಈ ವಿಚಾರಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರಿಗೆ ಗುಜರಾತ್‌ನ ಸೂರತ್ ನ್ಯಾಯಾಲಯ ಎರಡು ವರ್ಷಗಳ ಕಾಲ ಜೈಲು ಶಿಕ್ಷೆಯನ್ನು ವಿಧಿಸಿ ಎಂಬ ಆದೇಶ ಪ್ರಕಟಿಸಿದೆ. ಅಲ್ಲದೇ, ಐಪಿಸಿ ಸೆಕ್ಷನ್ 499 ಮತ್ತು 500 ರ ಅಡಿ ರಾಹುಲ್ ಗಾಂಧಿಯನ್ನು ತಪ್ಪಿತಸ್ಥರೆಂದು ಪರಿಗಣಿಸಿದ ನ್ಯಾಯಾಲಯ ಅವರಿಗೆ ಜಾಮೀನು ನೀಡಿದ್ದು, ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲು 30 ದಿನಗಳವರೆಗೆ ಶಿಕ್ಷೆಯನ್ನು ಅಮಾನತುಗೊಳಿಸಿದೆ.