Recent Posts

Monday, January 20, 2025
ಬೆಂಗಳೂರುರಾಜ್ಯಸುದ್ದಿ

​ರಾಜ್ಯದಲ್ಲಿ ಇಂದಿನಿಂದ 3 ದಿನ ಗುಡುಗು ಸಹಿತ ಮಳೆ ಸಾಧ್ಯತೆ – ಕಹಳೆ ನ್ಯೂಸ್ 

ಬೆಂಗಳೂರು: ರಾಜ್ಯ ರಾಜಧಾನಿ ಸೇರಿದಂತೆ ರಾಜ್ಯದ ಅನೇಕ ಕಡೆ ಸೋಮವಾರದಿಂದ 3 ದಿನಗಳ ವರೆಗೆ ಗುಡುಗು ಸಹಿತ ಮಳೆ (Rain) ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮಾರ್ಚ್ 27, 28 ಮತ್ತು 29 ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಹಾಸನ ಮತ್ತು ಮೈಸೂರು ಭಾಗದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಸೋಮವಾರ ಕೊಡಗು, ಬೀದರ್, ಕಲಬುರಗಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ 2 ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.