Recent Posts

Monday, January 20, 2025
ಸುದ್ದಿ

ಮಾದಕ ವಸ್ತು ಸೇವಿಸಿ ಅಮಲಿನಲ್ಲಿದ್ದ ವ್ಯಕ್ತಿಯನ್ನು ಬಂಧಿಸಿದ ಬಂಟ್ವಾಳ ಗ್ರಾಮಂತರ ಪೊಲೀಸರು : ಕಹಳೆ ನ್ಯೂಸ್

ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿ ಅಮಲಿನಲ್ಲಿದ್ದ ವ್ಯಕ್ತಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸ್ ಉಪ-ನಿರೀಕ್ಷಕ ಜಯಶ್ರೀ ಪ್ರಭಾಕರ ರವರು ನಿನ್ನೆ ರೌಂಡ್ಸ್‌ ಕರ್ತವ್ಯದಲ್ಲಿದ್ದ ವೇಳೆ ತುಂಬೆ ಸಾರ್ವಜನಿಕ ಬಸ್‌ ತಂಗುದಾಣದ ಬಳಿ ಓರ್ವ ವ್ಯಕ್ತಿ ಯಾವುದೋ ಮಾದಕ ವಸ್ತುವನ್ನು ಸೇವಿಸಿ ಅಮಲಿನಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸುತ್ತಿದ್ದ ಎನ್ನಲಾಗಿದೆ.

ಬಳಿಕ ಆತನನ್ನು ವಿಚಾರಿಸಿದಾಗ ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಮದಕ ನಿವಾಸಿ ಶೋಯೆಬ್‌ ಅಕ್ತರ್‌, ಎಂದು ತಿಳಿದು ಬಂದಿದ್ದು, ಕೂಡಲೇ ಆತನನ್ನು ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆ ನಡೆಸಿದಾಗ ಮಾಧಕ ವಸ್ತು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ.

ಸದ್ಯ ಆರೋಪಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡಿರುವುದಾಗಿದೆ ಪೊಲೀಸರು ತಿಳಿಸಿದ್ದಾರೆ