Sunday, January 19, 2025
ಕೃಷಿದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿಸುಳ್ಯ

ಮೀನು ಕೃಷಿಕರಿಂದ ಉತ್ಪಾದನೆಯಾಗುವ ಎಲ್ಲ ರೀತಿಯ ಮೀನುಗಳನ್ನು ನಿಗಮದಿಂದಲೇ ಖರೀದಿಗೆ ಯೋಜನೆ : ಸಚಿವ ಎಸ್‌. ಅಂಗಾರ – ಕಹಳೆ ನ್ಯೂಸ್

ಸುಳ್ಯ: ಮೀನು ಕೃಷಿಕರಿಂದ ಉತ್ಪಾದನೆಯಾಗುವ ಎಲ್ಲ ರೀತಿಯ ಮೀನುಗಳನ್ನು ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದಲೇ ಖರೀದಿಸಲು ಯೋಜನೆ ರೂಪಿಸಲಾಗುವುದು. ಈ ಬಗ್ಗೆ ಮುಖ್ಯಮಂತ್ರಿಗಳು ಸಮ್ಮತಿ ಸೂಚಿಸಿದ್ದಾರೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್‌. ಅಂಗಾರ ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಅವರು ರವಿವಾರ ಸುಳ್ಯದ ಯುವಜನ ಸಂಯುಕ್ತ ಮಂಡಳಿ ಮೈದಾನದಲ್ಲಿ ನಡೆದ ಕೇಂದ್ರ ಸರಕಾರದ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಸ್ವಾವಲಂಬಿ ಬದುಕಿಗಾಗಿ ಸ್ವೋ ಉದ್ಯೋಗ – ಮನೆ ಬಾಗಿಲಿಗೆ ತಾಜಾ ಮೀನು ಸರಬರಾಜು ಮಾಡುವ ಮತ್ಸ್ಯವಾಹಿನಿ ತ್ರಿಚಕ್ರ ವಾಹನಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ವಾಹನ ಲೋಕಾರ್ಪಣೆ ಮಾಡಿ ಮಾತನಾಡಿದರು.

ಯೋಜನೆಯಡಿ ಕರ್ನಾಟಕಕ್ಕೆ ಪ್ರಾಯೋಗಿಕವಾಗಿ ಮತ್ಸ್ಯವಾಹಿನಿ ವಾಹನ ಒದಗಿಸಲಾಗಿದೆ. 300 ವಾಹನಗಳು ರಾಜ್ಯಕ್ಕೆ ದೊರೆತಿದ್ದು, ಎರಡನೇ ಹಂತದಲ್ಲಿ ಎಷ್ಟು ಬೇಡಿಕೆ ಇದೆಯೋ ಅಷ್ಟು ವಾಹನ ನೀಡುವ ಭರವಸೆಯನ್ನು ಕೇಂದ್ರ ಸಚಿವರು ನೀಡಿದ್ದಾರೆ ಎಂದರು.

ಬಾಗಲಕೋಟೆ, ಕಡಬದ ಸವಣೂರು ಬಳಿ ಮೀನು ಮರಿ ಉತ್ಪತ್ತಿ ಘಟಕ ನಿರ್ಮಿಸಲಾಗುವುದು ಎಂದರು.

ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ. ತೀರ್ಥರಾಮ ಮಾತನಾಡಿ, ಮೀನುಗಾರಿಕೆ ಕ್ಷೇತ್ರದಲ್ಲಿ ಸ್ವೋದ್ಯೋಗಕ್ಕೆ ಬಹಳಷ್ಟು ಅವಕಾಶವಿದೆ. ಸಚಿವ ಅಂಗಾರ ಅವರು ಮೀನುಗಾರಿಕೆ ಇಲಾಖೆಗೆ ಕಾಯಕಲ್ಪ ನೀಡುವ ಕೆಲಸ ಮಾಡಿದ್ದಾರೆ ಎಂದರು.

ಸುಳ್ಯ ನ.ಪಂ. ಅಧ್ಯಕ್ಷ ವಿನಯಕುಮಾರ್‌ ಕಂದಡ್ಕ, ಸುಳ್ಯ ತಹಶೀಲ್ದಾರ್‌ ಮಂಜುನಾಥ್‌ ಜಿ., ಮಂಗಳೂರು ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಹರೀಶ್‌ ಕುಮಾರ್‌, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ. ಗಣೇಶ್‌, ನ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷೆ ಕಿಶೋರಿ ಶೇಟ್‌, ಮೀನುಗಾರಿಕಾ ಮಹಾವಿದ್ಯಾಲಯದ ಡಾ| ಎಚ್‌.ಎನ್‌. ಅಂಜನಪ್ಪ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಜಂಟಿ ನಿರ್ದೇಶಕ ಹರೀಶ್‌ ಕುಮಾರ್‌ ಉಪಸ್ಥಿತರಿದ್ದರು.

ಕರಾವಳಿ ಮೀನುಗಾರಿಕೆ ಇಲಾಖೆಯ ಅಪರ ನಿರ್ದೇಶಕ ದಿನೇಶ್‌ ಕುಮಾರ್‌ ಸ್ವಾಗತಿಸಿದರು. ಮೀನುಗಾರಿಕೆ ಇಲಾಖೆಯ ನಿರ್ದೇಶಕ ರಾಮಾಚಾರ್ಯ ಪುರಾಣಿಕ್‌ ಪ್ರಾಸ್ತಾವಿಕವಾಗಿ ಮಾತನಾಡಿದರು. ತಿಪ್ಪೇಸ್ವಾಮಿ ವಂದಿಸಿದರು. ಲತಾಶ್ರೀ, ಸುಪ್ರೀತ್‌ ಮೊಂಟಡ್ಕ ಕಾರ್ಯಕ್ರಮ ನಿರೂಪಿಸಿದರು. ಇಲಾಖೆಯ ವಿವಿಧ ಫ‌ಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಾಯಿತು.