Saturday, January 25, 2025
ಸುದ್ದಿ

ಪ್ರೀತಿಸಿದ ಹುಡುಗಿಗೆ ಬೇರೆ ಯುವಕನೊಂದಿಗೆ ಮದುವೆ ನಿಶ್ಚಯ : ಪ್ರೇಯಸಿಗೆ ಪೆಟ್ರೋಲ್ ಸುರಿದು ತಾನೂ ಆತ್ಮಹತ್ಯಗೆ ಯತ್ನ..! – ಕಹಳೆ ನ್ಯೂಸ್

ಬಾಗಲಕೋಟೆ:
ಪ್ರೀತಿಸಿದ ಹುಡುಗಿಗೆ ಮದುವೆ ನಿಶ್ಚಯ ಆಗಿದ್ದಕ್ಕೆ ಪ್ರಿಯಕರ ಆತ್ಮಹತ್ಯೆಗೆ ಯತ್ನಿಸಿರೋ ಘಟನೆ ಬಾಗಲಕೋಟೆ ಗುಡೂರು ಗ್ರಾಮದಲ್ಲಿ ನಡೆದಿದೆ.
ಅಫ್ಜಲ್ ಸೊಲ್ಲಾಪುರ(27) ಹಾಗೂ ನೇತ್ರಾವತಿ ವಡ್ಡರ್(21) ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಈ ನಡುವೆ ಯುವತಿಗೆ ಕುಟುಂಬಸ್ಥರು ಬೇರೆ ಯುವಕನೊಂದಿಗೆ ಮದುವೆ ನಿಶ್ಚಯ ಮಾಡಿದ್ದಾರೆ. ಈ ವಿಚಾರ ತಿಳಿದ ಪ್ರೇಮಿ ಅಫ್ಜಲ್ ನೇತ್ರಾವತಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಬಳಿಕ ತಾನು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಕೂಡಲೇ ಸ್ಥಳೀಯರು ಅಫ್ಜಲ್‌ನನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವತಿ ನೇತ್ರಾವತಿಯನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಅಮೀನಗಡ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು