Thursday, January 23, 2025
ಸುದ್ದಿ

ಕರ್ನಾಟಕ ವಿಧಾನಸಭಾ ಚುನಾವಣೆಗೆ ಡೇಟ್ ಫಿಕ್ಸ್..! ಚುನಾವಣೆಯ ನೀತಿ ಸಂಹಿತೆ ಜಾರಿ – ಕಹಳೆ ನ್ಯೂಸ್

ಕರ್ನಾಟಕ ವಿಧಾನಸಭಾ ಚುನಾವಣೆಗೆ ಡೇಟ್ ಫಿಕ್ಸ್ ಆಗಿದೆ. ಹೌದು ಮೇ. 10ರಂದು ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗ ಮಾಹಿತಿ ನೀಡಿದೆ. 224 ಸದಸ್ಯ ಬಲದ ಕರ್ನಾಟಕ ವಿಧಾನಸಭಾ ಚುನಾವಣಾ ಮತದಾನದ ವೇಳಾಪಟ್ಟಿ ಬಿಡುಗಡೆಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ದೆಹಲಿಯ ವಿಜ್ಞಾನ ಭವನದಲ್ಲಿ ಕೇಂದ್ರ ಚುನಾವಣಾ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಚುನಾವಣಾ ವೇಳಾಪಟ್ಟಿ ಪ್ರಕಟ ಮಾಡಿದ್ದಾರೆ. ಇನ್ನು ಕರ್ನಾಟಕದಲ್ಲಿ 5 ಕೋಟಿ 21 ಲಕ್ಷ ಮತದಾರರಿದ್ದಾರೆ.. 2ಕೋಟಿ 59ಲಕ್ಷ ಮಹಿಳಾ ಮತದಾರರು ಹಾಗೂ 2ಕೋಟಿ 62ಲಕ್ಷ ಪುರುಷ ಮತದಾರರಿದ್ದಾರೆ. 4,699 ತೃತೀಯ ಲಿಂಗ ಮತದಾರರಿದ್ದಾರೆ. ಮೇ 23ರ ಒಳಗೆ ವಿಧಾನಸಭೆ ಅಂತ್ಯವಾಗಬೇಕು. ಅದಕ್ಕೂ ಮುನ್ನ ಹೊಸ ಸರ್ಕಾರ ರಚನೆಯಾಗಬೇಕು.

ಇನ್ನು 80 ವರ್ಷ ಒಳಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ನೀಡಲಾಗಿದ್ದು, ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಮನೆಯಿಂದಲೇ ಮತದಾನ ಮಾಡಲು ಅವಕಾಶವನ್ನ ಕಲ್ಪಿಸಲಾಗಿದೆ ಎಂದು ಸುದ್ದಿಗೋಷ್ಟಿಯಲ್ಲಿ ಚುನಾವಣಾ ಆಯೋಗ ಮಾಹಿತಿ ನೀಡಿದೆ.