Recent Posts

Sunday, January 19, 2025
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ನೆಲ್ಯಾಡಿ : ಬೆಳ್ಳಂಬೆಳಿಗ್ಗೆ ಡಿವೈಡರ್‌‌ಗೆ ಕಾರು ಢಿಕ್ಕಿ ; ಮಹಿಳೆ ಮೃತ್ಯು, ಇಬ್ಬರಿಗೆ ಗಂಭೀರ ಗಾಯ – ಕಹಳೆ ನ್ಯೂಸ್

ಉಪ್ಪಿನಂಗಡಿ, ಮಾ 30 : ಬೆಳ್ಳಂಬೆಳಿಗ್ಗೆ ಕಾರು ಡಿವೈಡರ್ ಗೆ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಮಹಿಳೆ ಮೃತಪಟ್ಟಿದ್ದು, ಆಕೆಯ ಪತಿ ಮತ್ತು ಮಗ ಗಂಭೀರವಾಗಿ ಗಾಯಗೊಂಡ ಘಟನೆ ನೆಲ್ಯಾಡಿ ಸಮೀಪದ ಕರ್ಬಸಂಕ ಬಳಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಅನ್ನಪೂರ್ಣ(50)ಮೃತರು. ಮಗ ಅಶ್ವಿನ್ ಹಾಗೂ ಆತನ ತಂದೆ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರಿನಿಂದ- ಮಂಗಳೂರು ಕಡೆ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಕರ್ಬಸಂಕ‌ ಬಳಿ ಡಿವೈಡರ್ ಗೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಸ್ಥಳಕ್ಕೆ ಉಪ್ಪಿನಂಗಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ಹೆಚ್ಚಿನ‌ ಮಾಹಿತಿ ನಿರೀಕ್ಷಿಸಲಾಗಿದೆ.