Recent Posts

Sunday, January 19, 2025
ದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ಕಾಣಿಯೂರು ಇಡ್ಯಡ್ಕದಲ್ಲಿ ದೈವ ನರ್ತನದ ವೇಳೆ ಕುಸಿದು ಬಿದ್ದು ಇಹಲೋಕ ತ್ಯಜಿಸಿದ ದೈವ ನರ್ತಕ – ಕಹಳೆ ನ್ಯೂಸ್

ಕಾಣಿಯೂರು: ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಇಹಲೋಕ ತ್ಯಜಿಸಿದ ಘಟನೆ ಮಾ.30 ರಂದು ಕಡಬ ತಾಲೂಕಿನ ಕಾಣಿಯೂರು ಸಮೀಪ ದೋಳ್ಪಾಡಿ ಗ್ರಾಮದ ಇಡ್ಯಡ್ಕದಿಂದ ವರದಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಖ್ಯಾತ ದೈವ ನರ್ತಕ ಎಡಮಂಗಲ ಗ್ರಾಮದ ಕಾಂತು ಅಜಿಲ ಮೂಲಂಗೀರಿ (ಬಾಬು) (55) ಮೃತರು ಎಂದು ತಿಳಿದು ಬಂದಿದೆ.

ಹಲವಾರು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಕಟ್ಟಿಗೆ ಸಂಬಂಧಿಸಿದಂತೆ ದೈವಾರಾದಕರಾಗಿ ಗ್ರಾಮದೈವಗಳ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದರು.

ಮಾ.30 ರಂದು ದೋಳ್ಪಾಡಿ ಗ್ರಾಮದ ಇಡ್ಯಡ್ಕದಲ್ಲಿ ಗ್ರಾಮಕ್ಕೆ ಸಂಬಂಧಿಸಿದ ನೇಮೊತ್ಸವ ನಡೆಯುತ್ತಿತ್ತು. ದೈವ ನರ್ತನ ಮಾಡುತ್ತಿರುವಾಗಲೇ ಕುಸಿದು ಬೀಳುತ್ತಿರುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ದರೂ ಫಲ ನೀಡಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಹೃದಯಾಘಾತಕ್ಕೆ ಒಳಗಾಗಿರಬಹುದೆಂದು ಅಂದಾಜಿಸಲಾಗಿದೆ. ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.