Recent Posts

Monday, January 20, 2025
ಬೆಂಗಳೂರುರಾಜ್ಯಸುದ್ದಿ

ಹುಲಿ ಯೋಜನೆಗೆ 50 ವರ್ಷ : ಏಪ್ರಿಲ್ 9ರಂದು ಬಂಡೀಪುರದಲ್ಲಿ ಸಫಾರಿ ನಡೆಸಲಿದ್ದಾರೆ ಪ್ರಧಾನಿ ಮೋದಿ..! – ಕಹಳೆ ನ್ಯೂಸ್

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ರಾಜ್ಯಕ್ಕೆ ಏಳನೇ ಬಾರಿ ಪ್ರಧಾನಿ ಮೋದಿ ಆಗಮಿಸುತ್ತಿದ್ದು, ಈ ಬಾರಿಯ ವಿಸಿಟ್ ಸ್ಪೆಶಲ್ ಆಗಿರಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಏಪ್ರಿಲ್ 9ರಂದು ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮಿಸುತ್ತಿದ್ದು, ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಭೇಟಿ ನೀಡಲಿದ್ದಾರೆ.

ಹುಲಿ ಯೋಜನೆಗೆ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸುತ್ತಿದ್ದು, ಮೈಸೂರಿನಲ್ಲಿ ಮೂರು ದಿನಗಳ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಹುಲಿಗಣತಿ ವರದಿ, ಹುಲಿಸಂರಕ್ಷಣೆಗಾಗಿ ಸರ್ಕಾರ ಕೈಗೊಂಡ ಕ್ರಮಗಳ ವರದಿ, ನಾಣ್ಯ ಸ್ಮರಣಿಯನ್ನು ಪ್ರಧಾನಿ ಮೋದಿ ಮೈಸೂರಿನಲ್ಲಿ ಬಿಡುಗಡೆ ಮಾಡಲಿದ್ದಾರೆ. ಮೈಸೂರಿನ ಕಾರ್ಯಕ್ರಮ ನಂತರ ಬಂಡಪುರ ರಾಷ್ಟ್ರೀಯ ಉದ್ಯಾನವನಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಸಫಾರಿ ನಡೆಸಲಿದ್ದಾರೆ.