Tuesday, January 21, 2025
ಸುದ್ದಿ

ಪೈಟಿಂಗ್ ಕೆಲಸ ಮಾಡುತ್ತಿದ್ದ ವೇಳೆ ಆಯ ತಪ್ಪಿ ಬಿದ್ದು ಗಂಭೀರ ಗಾಯಗೊಂಡ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು – ಕಹಳೆ ನ್ಯೂಸ್

ಬಂಟ್ವಾಳ: ಪೈಟಿಂಗ್ ಕೆಲಸ ಮಾಡುತ್ತಿದ್ದ ವೇಳೆ ಆಯ ತಪ್ಪಿ ಬಿದ್ದ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವನು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಸೋರ್ನಾಡು ಎಂಬಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಜಕ್ರಿಬೆಟ್ಟು ಪಲ್ಲಿಕಂಡ ನಿವಾಸಿ ಪ್ರಸಿಲ್ಲಾ ವೇಗಸ್ ಅವರ ಪತಿ ರಾಬರ್ಟ್ ವೇಗಸ್ (51) ಮೃತಪಟ್ಟ ವ್ಯಕ್ತಿ. ವಿಜಯ್ ಎಂಬ ಪೈಟಿಂಗ್ ಗುತ್ತಿಗೆದಾರನ ಜೊತೆ ರಾಬರ್ಟ್ ವೇಗಸ್ ಅವರು ಪೈಟಿಂಗ್ ಕೆಲಸಕ್ಕೆ ಇದ್ದು, ಸೋರ್ನಾಡು ಎಂಬಲ್ಲಿ ಪೈಟಿಂಗ್ ಕೆಲಸ ಮಾಡುತ್ತಿದ್ದ ವೇಳೆ ಸುಮಾರು 1 ಗಂಟೆ ವೇಳೆಗೆ ಆಕಸ್ಮಿಕವಾಗಿ ಮೇಲಿನಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.

ಇವರನ್ನು ಚಿಕಿತ್ಸೆ ಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಆದರೆ ಗಂಭೀರವಾಗಿ ಗಾಯಗೊಂಡ ರಾಬರ್ಟ್ ಅವರು ಚಿಕಿತ್ಸೆಗೆ ಸ್ಪಂದಿಸದೆ ರಾತ್ರಿ ವೇಳೆ ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ