Monday, January 20, 2025
ಸುದ್ದಿ

ಶ್ರೀ ಶಾರದಾ ಫ್ರೆಂಡ್ಸ್ ಸರ್ಕಲ್ (ರಿ) ವಿದ್ಯಾನಗರ ಸಜೀಪಮುನ್ನೂರು ಸಂಸ್ಥೆಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯ ಗರಿಮೆ –ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಶಾರದಾ ಫ್ರೆಂಡ್ಸ್ ಸರ್ಕಲ್ (ರಿ) ವಿದ್ಯಾನಗರ ಸಜೀಪಮುನ್ನೂರು ಈ ಸಂಸ್ಥೆಯು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಶ್ರೀ ಶಾರದಾ ಫ್ರೆಂಡ್ಸ್ ಸರ್ಕಲ್ (ರಿ) ವಿದ್ಯಾನಗರ ಸಜೀಪಮುನ್ನೂರು ಈ ಸಂಸ್ಥೆಯು ಕಳೆದ ಮೂವತ್ತು ವರ್ಷಗಳಿಂದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ಅರಳುವ ಪ್ರತಿಭೆಗಳನ್ನು ಗುರುತಿಸಿ, ಪೋಷಿಸಿ ನಿರಂತರವಾಗಿ ಸಮಾಜ ಸೇವೆ ಮಾಡುತ್ತಾ ಆತ್ಮ ಸಂತೃಪ್ತಿಯ ಹಾದಿಯಲ್ಲಿ ಸಾಗುತ್ತಿದ್ದು, ಇವರ ನಿಸ್ವಾರ್ಥ ಸೇವೆಗೆ ೨೦೨೨ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.

ಎಲೆಮರೆ ಕಾಯಿಯಂತೆ ಇವರ ಈ ಸೇವೆಗೆ ಟೀಮ್ ಮಾಣಿಕ್ಯದಂಗಣದ ವತಿಯಿಂದ ಮಾಣಿಕ್ಯದ ಬೊಲ್ಪು ಬಿರುದನ್ನು ನೀಡಿ ಗೌರವಿಸಿದ್ದಾರೆ. ಈ ಸಂದರ್ಭದಲ್ಲಿ ಮಾಣಿಕ್ಯದಂಗಣದ ಸಂಸ್ಥಾಪಕರಾದ ಚಂದ್ರಶೇಖರ್ ಪೂಜಾರಿ, ಶ್ರೀ ಶಾರದಾ ಫ್ರೆಂಡ್ಸ್ ಸರ್ಕಲ್ (ರಿ)ವಿದ್ಯಾನಗರ ಸಜೀಪಮುನ್ನೂರು ಇದರ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು. ಇನ್ನೂ ಈ ಕಾರ್ಯಕ್ರಮವನ್ನ ಖ್ಯಾತ ಕಾರ್ಯಕ್ರಮ ನಿರೂಪಕರಾದ ದಿನೇಶ್ ಸುವರ್ಣ ರಾಯಿ ನಿರೂಪಿಸಿದ್ದಾರೆ.