Recent Posts

Sunday, January 19, 2025
ಸುದ್ದಿ

ನಿಮ್ಮನ್ನು ಸಂಸದರನ್ನಾಗಿ ಮಾಡಿದ್ದು ನಮ್ಮ ದುರಂತ ; ಪ್ರತಾಪ್ ಸಿಂಹರನ್ನು ತರಾಟೆಗೆ ತೆಗೆದುಕೊಂಡ ಬಿಜೆಪಿ ಮುಖಂಡ – ಕಹಳೆ ನ್ಯೂಸ್

ಮಡಿಕೇರಿ, ಸೆ13 : ಕೊಡಗು, ಮಡಿಕೇರಿಗಳಿಗೆ ಆಗಮಿಸುತ್ತಿರುವ ಕೇಂದ್ರದ ಪರಿಶೀಲನೆ ತಂಡಗಳಿಗೆ ತಪ್ಪು ಮಾಹಿತಿ ನೀಡುತ್ತಿದ್ದೀರಿ, ನಿಮ್ಮನ್ನು ಸಂಸದರನ್ನಾಗಿ ಮಾಡಿದ್ದು ನಮ್ಮ ದುರಂತ ಎಂದು ಸಂಸದ ಪ್ರತಾಪ್ ಸಿಂಹ ಅವರನ್ನು ಸ್ಥಳೀಯ ಬಿಜೆಪಿ ಮುಖಂಡ ಎಂ.ಬಿ.ದೇವಯ್ಯ ತೀವ್ರ ತರಾಟೆಗೆ ತೆಗೆದುಕೊಂಡಿರುವ ಘಟನೆ ನಡೆದಿದೆ.

ಕೇಂದ್ರದಿಂದ ಪರಿಶೀಲನೆ ನಡೆಸಲು ಬಂದಿರುವ ತಂಡಕ್ಕೆ ಭೂ ಪರಿವರ್ತನೆಯ ಬಗ್ಗೆ ಮಾಹಿತಿ ನೀಡುತ್ತಿದ್ದ ಸಂಸದರನ್ನು ತರಾಟೆಗೆ ತೆಗೆದುಕೊಂಡ ಅವರು, ನೀವು ಕೇಂದ್ರದ ಪರಿಶೀಲನೆ ತಂಡಗಳಿಗೆ ತಪ್ಪು ಮಾಹಿತಿ ನೀಡುತ್ತಿದ್ದೀರಿ. ನಿಮ್ಮನ್ನು ಸಂಸದರನ್ನಾಗಿ ಮಾಡಿದ್ದು ನಮ್ಮ ದುರಂತ ಎಂದು ಹೇಳೀದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೇಂದ್ರದ ಪರಿಶೀಲನೆ ತಂಡಗಳಿಗೆ ತಪ್ಪು ಮಾಹಿತಿ ನೀಡುವುದರ ಜೊತೆಗೆ ಜನರನ್ನು ಒಕ್ಕಲೆಬ್ಬಿಸಲು ಪ್ರಯತ್ನಿಸುತ್ತಿದ್ದೀರಿ. ಈಗಾಗಲೇ ಕೊಡವರು ನೋವಿನಿಂದ ಬೆಂದು ಹೋಗಿದ್ದಾರೆ. ಬೆಂದ ಗಾಯಕ್ಕೆ ಉಪ್ಪು ನೀರು ಸುರಿಯುವ ಕೆಲಸ ಮಾಡುತ್ತಿದ್ದೀರಿ ಎಂದು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನಿಮ್ಮಂಥಹ ಸಂಸದರು ಇರುವುದರಿಂದ ಪಕ್ಷ ಉದ್ಧಾರ ಆಗಲ್ಲ. ನೀವು ಮೊದಲು ನಮ್ಮ ಪಕ್ಷದ ಸಂಸದ ಎಂಬುದನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಪಕ್ಷದಲ್ಲಿ ನನ್ನ ವಿರುದ್ಧ ಏನು ಕ್ರಮ ತೆಗೆದುಕೊಳ್ಳುತ್ತೀರೋ ತೆಗೆದುಕೊಳ್ಳಿ ಎಂದು ತಿಳಿಸಿದ್ದಾರೆ.

ಬಿಜೆಪಿಯ ಹಿರಿಯ ಮುಖಂಡರ ಹೇಳಿಕೆಯಿಂದ ಸಂಸದ ಪ್ರತಾಪ್ ಸಿಂಹ ತೀವ್ರ ಮುಜುಗರಕ್ಕೊಳಗಾಗಿ ಸ್ಥಳದಿಂದ ತೆರಳಿದರು ಎನ್ನಲಾಗಿದೆ. ಕೇಂದ್ರದ ಪರಿಶೀಲನೆ ತಂಡದೊಂದಿಗೆ ಸಂಸದ ಪ್ರತಾಪ್ ಸಿಂಹರವರು ಮಡಿಕೇರಿ ತಾಲೂಕಿನ ಹೆಬ್ಬೆಟ್ಟಗೇರಿ ಗ್ರಾಮಕ್ಕೆ ಬಂದಿದ್ದ ವೇಳೆ ಈ ವಾಗ್ವಾದ ನಡೆದಿದೆ.