Recent Posts

Sunday, January 19, 2025
ಸುದ್ದಿ

ಸಂಪಾಜೆ ಘಾಟ್ ರಸ್ತೆಯಲ್ಲಿ ಲಘು ವಾಹನ ಸಂಚಾರ ಆರಂಭ – ಕಹಳೆ ನ್ಯೂಸ್

ಮಂಗಳೂರು, ಸೆ13 : ಮಂಗಳೂರು ನಗರ ಮತ್ತು ಮೈಸೂರು ಸಂಪರ್ಕಿಸುವ ಸಂಪಾಜೆ ಘಾಟ್ ರಸ್ತೆಯಲ್ಲಿ ಲಘು ವಾಹನ ಸಂಚಾರವನ್ನು ಆರಂಭಿಸಲು ಒಪ್ಪಿಗೆ ನೀಡಲಾಗಿದೆ.

ಭೂ ಕುಸಿತದಿಂದಾಗಿ ಕಳೆದ ಒಂದು ತಿಂಗಳಿನಿಂದ ಘಾಟ್ ರಸ್ತೆಯಲ್ಲಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಮಂಗಳೂರು-ಮೈಸೂರು ಸಂಪರ್ಕಿಸುವ ಸಂಪಾಜೆ ಘಾಟ್ ರಸ್ತೆ ಮರು ನಿರ್ಮಾಣಕ್ಕೆ ತಿಂಗಳುಗಳೇ ಬೇಕಾಗಬಹುದು ಎಂದು ಅಂದಾಜಿಸಲಾಗಿತ್ತು. ಸಂಪಾಜೆ ಘಾಟ್ ರಸ್ತೆಯಲ್ಲಿ ಸುಮಾರು 25ಕ್ಕೂ ಹೆಚ್ಚು ಕಡೆ ಭೂ ಕುಸಿತ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ  ಸಂಪಾಜೆ ಘಾಟ್ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿಷೇಧಿಸಲಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಆದರೆ ರಸ್ತೆ ದುರಸ್ತಿ ಕಾಮಗಾರಿ ಶೀಘ್ರವಾಗಿ ಪೂರ್ಣಗೊಂಡ ಕಾರಣ ಲಘು ವಾಹನಗಳಿಗೆ ಸಂಪಾಜೆ ಘಾಟ್ ರಸ್ತೆಯಲ್ಲಿ ಸಂಚಾರ ನಡೆಸಲು ಅನುಮತಿ ನೀಡಲಾಗಿದೆ. ಮಾತ್ರವಲ್ಲ, ಒಂದು ತಿಂಗಳೊಳಗೆ ಎಲ್ಲಾ ರೀತಿಯ ವಾಹನಗಳಿಗೆ ಸಂಪಾಜೆ ಘಾಟ್ ಮೂಲಕ ಮಡಿಕೇರಿ ಪ್ರಯಾಣ ಸಾಧ್ಯವಾಗಲಿದೆ ಎಂದು ಮೂಲಗಳು ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸಂಪಾಜೆಘಾಟ್ರಸ್ತೆಯಲ್ಲಿರಾಷ್ಟ್ರೀಯ ಹೆದ್ದಾರಿ ಇಲಾಖೆ ಸಿಬ್ಬಂದಿಗಳು ಸಮರೋಪಾದಿಯಲ್ಲಿ ರಸ್ತೆ ದುರಸ್ತಿ ಕಾಮಗಾರಿ ನಡೆಸುತ್ತಿದ್ದಾರೆ. ಮಳೆ ನಿಂತಿರುವ ಹಿನ್ನೆಲೆ ಕಾಮಗಾರಿ ಮುಂದುವರೆದಿದ್ದು ಶೀಘ್ರ ಸಂಪಾಜೆ ಘಾಟ್ ಸಂಪೂರ್ಣವಾಗಿ ವಾಹನ ಸಂಚಾರಕ್ಕೆ ಮುಕ್ತವಾಗಲಿದೆ.