Recent Posts

Tuesday, January 21, 2025
ಸುದ್ದಿ

ಸಂತ ಫಿಲೋಮಿನಾ ಕಾಲೇಜಿನಲ್ಲಿ ವಿಶ್ವ ರಂಗಭೂಮಿ ದಿನಾಚರಣೆ – ಕಹಳೆ ನ್ಯೂಸ್

ಸಂತ ಫಿಲೋಮಿನಾ ಕಾಲೇಜಿನ ಯಕ್ಷ ಕಲಾಕೇಂದ್ರ ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೋಶಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಸ್ಪಂದನ ಸಭಾಂಗಣದಲ್ಲಿ ವಿಶ್ವ ರಂಗಭೂಮಿ ದಿನವನ್ನು ಆಚರಿಸಲಾಯಿತು. ಕಾಲೇಜಿನ ಉಪಪ್ರಾಂಶುಪಾಲರಾದ ಡಾ| ಎ ಪಿ ರಾಧಾಕೃಷ್ಣ ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಯಕ್ಷಗಾನ ಹಾಗೂ ರಂಗಭೂಮಿಯ ಮಹತ್ವವನ್ನು ತಿಳಿಸಿ ತಮ್ಮ ಜೀವನದಲ್ಲಿ ಅವು ಬೀರಿದ ಪ್ರಭಾವವನ್ನು ವಿವರಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ವಂ| ಡಾ ಆಂಟನಿ ಪ್ರಕಾಶ್ ಮೊಂತೆರೋ ರವರು “ನಾಟಕ ಹಾಗೂ ರಂಗಭೂಮಿ ನಮ್ಮ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತವೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸಮಾಜದ ಅಭಿವೃದ್ಧಿಗೆ ರಂಗಭೂಮಿಯ ಕೊಡುಗೆ ಬಹಳಷ್ಟಿದೆ. ರಂಗಕಲೆಯ ಮೂಲಕ ಜನಸಾಮಾನ್ಯರಿಗೆ ಪುರಾಣಗಳ ಬಗ್ಗೆ, ಸಾಮಾಜಿಕ ಸಮಸ್ಯೆಗಳು ಮತ್ತು ಪಿಡುಗುಗಳ ಬಗ್ಗೆ ಅರಿವುಮೂಡಿಸಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಚಲನಚಿತ್ರಗಳಿಗೆ ಸಿಗುವ ಮಹತ್ವವು ನಾಟಕಗಳಿಗೆ ಸಿಗುತ್ತಿಲ್ಲ. ರಂಗಕಲೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ರ‍್ತವ್ಯವಾಗಿದೆ. ಕಲೆಯಲ್ಲಿ ತೊಡಗಿಸಿಕೊಂಡಲ್ಲಿ ವಿದ್ಯಾರ್ಥಿಗಳಿಗೆ ಜೀವನದಲ್ಲಿ ಶಿಸ್ತನ್ನು ಅಳವಡಿಸಿಕೊಂಡು ಶೈಕ್ಷಣಿಕವಾಗಿಯೂ ಅಭಿವೃದ್ಧಿಹೊಂದಬಹುದಾಗಿದೆ” ಎಂದು ಹೇಳಿದರು. ವಿದ್ಯಾರ್ಥಿಗಳಿಗೆ ಸಮೃದ್ಧಿ ಶೆಣೈ ರಂಗಗೀತೆಗಳನ್ನು ಹಾಡಿದರು. ಅಭಿಜ್ಞಾ ಮತ್ತು ಬಳಗ ಪ್ರರ‍್ಥಿಸಿದರು. ಕಾಲೇಜಿನ ಯಕ್ಷಕಲಾಕೇಂದ್ರದ ಸಂಯೋಜಕರಾದ ಪ್ರಾಶಾಂತ್ ರೈ ಸ್ವಾಗತಿಸಿ ವಂದಿಸಿದರು. ಸುಧನ್ವ ಶ್ಯಾಮ್ ಕಾರ್ಯಕ್ರಮದ ನಿರೂಪಿಸಿದರು. ಯಕ್ಷಕಲಾಕೇಂದ್ರದ ವಿದ್ಯಾರ್ಥಿಗಳು ಕಾರ್ಯಕ್ರದಲ್ಲಿ ಉಪಸ್ಥಿತರಿದ್ದರು.