Tuesday, January 21, 2025
ಸುದ್ದಿ

ಮೂಡುಬಿದಿರೆಯ ಖ್ಯಾತ ಕೃಷಿ ತಜ್ಞ ಡಾ.ಎಲ್.ಸಿ ಸೋನ್ಸ್ ನಿಧನ – ಕಹಳೆ ನ್ಯೂಸ್

ಮೂಡುಬಿದಿರೆ, ಎಪ್ರಿಲ್ 05: ಕೃಷಿ ತಜ್ಞ, ‘ಕೃಷಿ ಋಷಿ’ ಎಂದೇ ಗುರುತಿಸಿಕೊಂಡಿದ್ದ ಮೂಡುಬಿದಿರೆ ಬನ್ನಡ್ಕದ ಸೋನ್ಸ್ ಫಾರ್ಮ್‍ನ ಪ್ರಗತಿಪರ ಕೃಷಿಕ ಡಾ.ಎಲ್.ಸಿ ಸೋನ್ಸ್(89) ಇಂದು ಬೆಳಗ್ಗೆ ನಿಧನರಾದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕೃಷಿ ಕ್ಷೇತ್ರದಲ್ಲಿ ವಿಶಿಷ್ಟ ರೀತಿಯ ಸಾಧನೆ ಮಾಡಿರುವ ಸೋನ್ಸ್ ಅನಾನಸು ಕೃಷಿ, ಬಿದಿರಿನ ವಿವಿಧ ಪ್ರಬೇಧ, ದೇಶ-ವಿದೇಶಗಳ ಹಣ್ಣು-ತರಕಾರಿ ಪ್ರಬೇಧಗಳನ್ನು ಮೂಡುಬಿದಿರೆ ಬನ್ನಡ್ಕದ ಮಣ್ಣಿನಲ್ಲಿ ಬೆಳೆಸಿ, ಅದರಿಂದ ಫಸಲು ಹಾಗೂ ಲಾಭಗಳಿಸಿದವರಾಗಿದ್ದಾರೆ. ಜಲ ತಜ್ಞರಾಗಿಯೂ ವಿಶೇಷ ಪರಿಣಿತಿಯನ್ನು ಹೊಂದಿದ್ದರು

1934ರ ಎಪ್ರಿಲ್ 4ರಂದು ಜನಿಸಿದ ಲಿವಿಂಗ್ ಸ್ಟನ್ ಚಂದ್ರಮೋಹನ ಸೋನ್ಸ್ ಮಂಗಳವಾರ 89 ವರ್ಷ ತುಂಬಿ 90ಕ್ಕೆ ಕಾಲಿರಿಸಿದ್ದರು. ಮೂಡುಬಿದಿರೆ ಪಡುಮಾರ್ನಾಡು ಗ್ರಾಮದ ಬನ್ನಡ್ಕದಲ್ಲಿ ಕೃಷಿ ಕುಟುಂಬದ ಕುಡಿ ಇವರು.

ತನ್ನ ಜೀವನವನ್ನು ಕೃಷಿಗಾಗಿ ಮುಡಿಪಾಗಿಟ್ಟವರು ಸೋನ್ಸ್. ಸಸ್ಯ ಶಾಸ್ತ್ರದಲ್ಲಿ ಪದವಿ, ಮೊಂಟಾನ ವಿ.ವಿ.ಯಿಂದ ಪಿಎಚ್ ಡಿ. ಪದವಿ ಪಡೆದುಕೊಂಡಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಹಾಗೂ ತನ್ನೊಂದಿಗೆ ಕೃಷಿಯಲ್ಲಿ ತೊಡಗಿಸಿಕೊಂಡ ಸಹೋದರ ಐ.ವಿ. ಸೋನ್ಸ್ ಇವರನ್ನು ಅಗಲಿದ್ದಾರೆ.