Thursday, January 23, 2025
ದಕ್ಷಿಣ ಕನ್ನಡರಾಜ್ಯಸುದ್ದಿ

ವಿಧಾನಸಭಾ ಚುನಾವಣೆ ಹಿನ್ನೆಲೆ ; ಸಿಆರ್‌ಪಿಎಫ್ ನ 8 ತುಕಡಿ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮನ – ಕಹಳೆ ನ್ಯೂಸ್

ಮಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ದ.ಕ. ಜಿಲ್ಲೆಗೆ ತಲಾ 80ರಿಂದ 100 ಮಂದಿ ಇರುವ ಕೇಂದ್ರ ಮೀಸಲು ಪೊಲೀಸ್‌ ಪಡೆಯ (ಸಿಆರ್‌ಪಿಎಫ್) ಒಟ್ಟು 8 ತುಕಡಿಗಳು ಮಂಗಳವಾರ ತಡರಾತ್ರಿ ಆಗಮಿಸಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಗೆ ನಾಲ್ಕು ಹಾಗೂ ದ.ಕ. ಜಿಲ್ಲಾ ಪೊಲೀಸ್‌ ವ್ಯಾಪ್ತಿಗೆ ನಾಲ್ಕು ತುಕಡಿಗಳನ್ನು ನಿಯೋಜಿಸಲಾಗುವುದು. ತಲಾ ಒಂದು ವಿಧಾನಸಭಾ ಕ್ಷೇತ್ರಕ್ಕೆ ಒಂದು ತುಕಡಿಯಂತೆ ನಿಯೋಜಿಸಲು ನಿರ್ಧರಿಸಲಾಗಿದ್ದು ಸುಳ್ಯ ಮತ್ತು ಬಂಟ್ವಾಳಕ್ಕೆ ಈಗಾಗಲೇ ತಲುಪಿವೆ.

ಮುಂದಿನ ದಿನಗಳಲ್ಲಿ ಇನ್ನೂ ನಾಲ್ಕು ತುಕಡಿ ಆಗಮಿಸುವ ನಿರೀಕ್ಷೆ ಇದೆ ಎಂದು ಪೊಲೀಸ್‌ ಆಯುಕ್ತ ಕುಲದೀಪ್‌ ಕುಮಾರ್‌ ಆರ್‌.ಜೈನ್‌ ಮತ್ತು ಎಸ್‌ಪಿ ಡಾ| ವಿಕ್ರಮ್‌ ಅಮಟೆ ತಿಳಿಸಿದ್ದಾರೆ.