Sunday, January 19, 2025
ಸುದ್ದಿ

ಕಲಬುರಗಿ : ‘SSLC’ ಪರೀಕ್ಷೆಯಲ್ಲಿ ಸಾಮೂಹಿಕ ನಕಲು : 16 ಶಿಕ್ಷಕರ ಅಮಾನತು – ಕಹಳೆ ನ್ಯೂಸ್

ಕಲಬುರಗಿ : ಎಸ್‌ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲಿಗೆ ಸಹಕರಿಸಿದ ಆರೋಪದ ಹಿನ್ನೆಲೆಯಲ್ಲಿ ಅಫಜಲ್ಪುರ ತಾಲೂಕಿನ ಗೊಬ್ಬರು ಎಸ್‌ಎಸ್ ಎಲ್ ಸಿ ಪರೀಕ್ಷಾ ಕೇಂದ್ರದ 16 ಶಿಕ್ಷಕರನ್ನು ಅಮಾನತು ಮಾಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಗೊಬ್ಬೂರ (ಬಿ) ಸರ್ಕಾರಿ ಪ್ರೌಢಶಾಲೆಯಲ್ಲಿ ಏಪ್ರಿಲ್ 3 ರಂದು ನಡೆದ ಎಸ್‌ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಮಾಡಲು ಅವಕಾಶಮಾಡಿಕೊಟ್ಟ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದ ಅಧೀಕ್ಷಕರು, ಕಸ್ಟೋಡಿಯನ್, ಜಾಗೃತದಳ, ಕೋಣೆ ಮೇಲ್ವಿಚಾರಕರು ಸೇರಿ 16 ಶಿಕ್ಷಕರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಅಪರ ಆಯುಕ್ತ ಆನಂದ ಮೀನಾ, ಎಸ್‌ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲಿಗೆ ಅವಕಾಶ ಮಾಡಿಕೊಟ್ಟು ಪರೀಕ್ಷೆಯ ಪಾವಿತ್ರ್ಯತೆಯನ್ನೇ ವಿಫಲಗೊಳಿಸಿ, ಕರ್ತವ್ಯ ಲೋಪ ಎಸಗಿರುವ ಆರೋಪದ ಮೇಲೆ 16 ಶಿಕ್ಷಕರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ.