

ನೀರುಮಾರ್ಗ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯಲ್ಲಿ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಭಾಗವಹಿಸಿ ಚುನಾವಣಾ ಪೂರ್ವ ತಯಾರಿಯ ಬಗ್ಗೆ ಮಾಹಿತಿ ನೀಡಿದರು.
ಮಂಡಲದ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಚ್ಚನಾಡಿ ಹಾಗೂ ಮಂಡಲ ಕಾರ್ಯದರ್ಶಿಗಳಾದ ಅಮರೇಶ್ ಬೈಕಲ್ ಹಾಗೂ ಮಹಾಶಕ್ತಿ ಕೇಂದ್ರ ಅಧ್ಯಕ್ಷರು, ಕಾರ್ಯದರ್ಶಿ, ಮಹಾಶಕ್ತಿ ಕೇಂದ್ರ ಪ್ರಮುಖರು, ಶಕ್ತಿ ಕೇಂದ್ರ ಪ್ರಮುಖರು, ಬೂತ್ ಅಧ್ಯಕ್ಷರು, ಕಾರ್ಯದರ್ಶಿ, ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ಮುಖಂಡರು, ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
