ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡಲು ರೆಡಿ ಆಗಿರುವ ನಟ ಕಿಚ್ಚ ಸುದೀಪ್ ಅವರಿಗೆ ಬೆದರಿಕೆ ಪತ್ರವೊಂದು ಬಂದಿದೆ. ಇದೀಗ ಕೇಸ್ ಸಿಸಿಬಿಗೆ ವರ್ಗಾವಣೆ ಆಗಿದೆ.
ತನಿಖೆ ನಡೆಸಿದ ಮಾಹಿತಿಯನ್ನ ಪೊಲೀಸರು ಸಂಗ್ರಹಿಸಿದ್ದು, ಈ ಕೇಸ್ ಸಿಬಿಗೆ ವರ್ಗಾವಣೆ ಆಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.
ಎಲ್ಲಾ ಆಯಾಮದಲ್ಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ರಾಜಕೀಯ ಹಾಗೂ ಸಿನಿಮಾರಂಗ ಎರಡೂ ಆಯಾಮದಲ್ಲೂ ತನಿಖೆ ಬಿಗಿ ಗೊಳಿಸಿದ್ದಾರೆ. ಈ ನಡುವೆ ಸಿನಿಮಾರಂಗದ ಕೆಲ ವಿರೋಧಿಗಳ ಜೊತೆ ಸೇರಿ ವ್ಯಕ್ತಿಯೋರ್ವ ಈ ಕೃತ್ಯ ನಡೆಸಿರಬಹುದು ಎನ್ನುವ ಸಂದೇಹ ವ್ಯಕ್ತವಾಗಿದೆ.
ಪ್ರಕರಣಕ್ಕೆ ಸಂಬAಧಿಸಿದAತೆ ಸುದೀಪ್ ಬಳಿಯೂ ಮಾಹಿತಿ ಕಲೆ ಹಾಕಲಾಗಿದೆ. ಈ ವೇಳೆ ಸುದೀಪ್ ಮತ್ತವರ ತಂಡ ಕಾರು ಚಾಲಕನ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ ಎಂದು ಹೇಳಖಲಾಗುತ್ತಿದೆ. ಇತ್ತೀಚೆಗೆ ಕಾರು ಚಾಲಕನೊಬ್ಬನನ್ನು ಸುದೀಪ್ ಕೆಲಸದಿಂದ ತೆಗೆದು ಹಾಕಿದ್ದರಿಂದ ದ್ವೇಷದ ಹಿನ್ನೆಲೆಯಲ್ಲಿ ಈ ರೀತಿ ನಡೆದುಕೊಂಡಿರಬಹುದು ಎನ್ನುವ ಅನುಮಾನ ಇದೀಗ ಹೊರ ಬಿದ್ದಿದೆ.
ಹೀಗಾಗಿ ಪ್ರಕರಣದ ಹೆಚ್ಚಿನ ತನಿಖೆ ವಿಚಾರವಾಗಿ ಕೇಸ್ ಸಿಸಿಬಿಗೆ ವರ್ಗಾವಣೆ ಮಾಡಿದ್ದು, ಮಾಜಿ ಕಾರು ಚಾಲಕನಿಗಾಗಿ ಸಿಸಿಬಿ ತೀವ್ರ ಹುಡುಕಾಟ ನಡೆಸಿದ್ದಾರೆ. ಕೇಸ್ ಆದ ಬಳಿಕ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿರುವ ಕಾರು ಚಾಲಕ ನಾಪತ್ತೆಯಾಗಿನೆ. ಮಾಜಿ ಕಾರು ಚಾಲಕನನ್ನ ಹಿಡಿದರೆ ಯಾರ ಜೊತೆ ಸೇರಿ ಕುತಂತ್ರ ಮಾಡಿದ್ದಾರೆ ಎಂಬುದಕ್ಕೆ ಉತ್ತರ ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.