ವಿಧಾನಸಭಾ ಚುನಾವಣೆ ಹಿನ್ನಲೆ : ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ತುಂಬಲು ಬಂಟ್ವಾಳ ಹಾಗೂ ಪುತ್ತೂರಿನಲ್ಲಿ ಪೊಲೀಸ್ ಪಥ ಸಂಚಲನ – ಕಹಳೆ ನ್ಯೂಸ್
ಮಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವ್ಯಾಪ್ತಿಯಲ್ಲಿ ಚುನಾವಣಾ ಕರ್ತವ್ಯ ನಿರ್ವಹಿಸಲು ಮೊದಲ ಹಂತದಲ್ಲಿ 4 ಸಿ ಆರ್ ಪಿ ಎಫ್ ತಂಡಗಳು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ್ದು, ಬಂಟ್ವಾಳ ಹಾಗೂ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರಮುಖ ಹಾಗೂ ಸೂಕ್ಷ್ಮ ಸ್ಥಳಗಳಲ್ಲಿ ಜಿಲ್ಲಾ ಎಸ್ಪಿ ಅವರ ನೇತೃತ್ವದಲ್ಲಿ 2 ಸಿ ಆರ್ ಪಿ ಎಫ್ ತಂಡಗಳು ಹಾಗೂ ಒಂದು ಕೆ ಎಸ್ ಆರ್ ಪಿ ತುಕಡಿ ಮತ್ತು ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಪಥ ಸಂಚಲನ ನಡೆಸಿ ಸಾರ್ವಜನಿಕರಲ್ಲಿ ಧೈರ್ಯ ಹಾಗೂ ಆತ್ಮ ವಿಶ್ವಾಸ ತುಂಬಲಾಯಿತು.
ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಸಿ ಆರ್ ಪಿ ಎಫ್ ತಂಡಗಳು ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದ ಸೂಕ್ಷ್ಮ ಸ್ಥಳಗಳಲ್ಲಿ ಪಥ ಸಂಚಲನ ನಡೆಸಿ ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಹಾಗೂ ಧೈರ್ಯ ತುಂಬುವ ಮೂಲಕ ಪಾರದರ್ಶಕ ಚುನಾವಣೆ ನಡೆಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಪ್ರಯತ್ನ ನಡೆಸಲಿದೆ ಎಂದು ಜಿಲ್ಲಾ ಎಸ್ಪಿ ಡಾ ವಿಕ್ರಂ ಅಮಾಟೆ ತಿಳಿಸಿದ್ದಾರೆ.