Sunday, January 26, 2025
ಸುದ್ದಿ

ನಟಿ ಖುಷ್ಬೂ ಸುಂದರ್‌ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ನಟಿ ಹಾಗೂ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಆರೋಗ್ಯದಲ್ಲಿ ಏರುಪೇರಾಗಿದೆ. ತೀವ್ರ ಜ್ವರದಿಂದ ಬಳಲುತ್ತಿದ್ದ ಖುಷ್ಬೂ ಅವರನ್ನು ಹೈದರಾಬಾದ್‌ನ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಹಿಂದಿ ಸಿನಿಮಾದ ಮೂಲಕ ಬಾಲ ನಟಿಯಾಗಿ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಖುಷ್ಬೂ ಆ ಬಳಿಕ ಸ್ಟಾರ್ ನಟಿಯಾಗಿ ಗುರುತಿಸಿಕೊಂಡರು.

ತಮಿಳು, ಮಲಯಾಳಂ, ಹಿಂದಿ, ತೆಲುಗು, ಕನ್ನಡ ಸೇರಿದಂತೆ ಸಾಕಷ್ಟು ಭಾಷೆಗಳಲ್ಲಿ ನಟಿಸಿ ಸೈ ಎನಿಸಿಕೊಂಡ ಖುಷ್ಭೂ ರಾಜಕೀಯಕ್ಕೆ ಎಂಟ್ರಿಕೊಟ್ಟು ಅಲ್ಲೂ ಖ್ಯಾತಿ ಘಳಿಸಿದ್ದಾರೆ.

ಸಿನಿಮಾ ಹಾಗೂ ರಾಜಕೀಯ ಎರಡು ಕ್ಷೇತ್ರದಲ್ಲಿ ತೊಡಗಿಕೊಂಡಿರುವ ನಟಿ ಖುಷ್ಬೂ ಇತ್ತೀಚಿನ ದಿನಗಳಲ್ಲಿ ಜ್ವರ ಮತ್ತು ಬಾಡಿ ವೀಕ್‌ನೆಸ್‌ನಿಂದ ಬಳಲುತ್ತಿದ್ದಾರೆ. ಈ ಬಗ್ಗೆ ಸ್ವತಃ ಸೋಷಿಯಲ್ ಮೀಡಿಯಾ ಮೂಲಕ ನಟಿ ತಿಳಿಸಿದ್ದಾರೆ. ವಿಪರೀತ ಜ್ವರ, ತುಂಬಾ ನೋವು ಮತ್ತು ದೌರ್ಬಲ್ಯ ನನನ್ನು ಕೊಲ್ಲುತ್ತಿದೆ. ನಾನು ಹೈದರಾಬಾದ್‌ನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ದಯವಿಟ್ಟು ಆರೋಗ್ಯವನ್ನು ನಿರ್ಲಕ್ಷಿಸಬೇಡಿ ಎಂದು ನಟಿ ಬರೆದುಕೊಂಡಿದ್ದಾರೆ.

ನಟಿ ಖುಷ್ಬೂ ಅನಾರೋಗ್ಯದ ವಿಚಾರ ತಿಳಿಯುತ್ತಿದ್ದಂತೆ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ನನ್ನ ಆರೋಗ್ಯದಲ್ಲಿ ಇದೀಗ ಚೇತರಿಕೆ ಕಂಡಿದೆ. ನಾನು ಹುಷಾರಾಗಿದ್ದೇನೆ ಆತಂಕ ಪಡುವ ಅಗತ್ಯವಿಲ್ಲ ಎಂದು ಖುಷ್ಭೂ ಸ್ಪಷ್ಟಪಡಿಸಿದ್ದಾರೆ.