Saturday, January 25, 2025
ಸುದ್ದಿ

ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು.. ; ವ್ಯಕ್ತಿಯೋರ್ವ ಸಾವು..! –ಕಹಳೆ ನ್ಯೂಸ್

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬಿಸಿರೋಡಿನಲ್ಲಿ ನಡೆದಿದೆ. ಮೃತಪಟ್ಟವರನ್ನು ನಂದರಬೆಟ್ಟು ನಿವಾಸಿ ಸದಾಶಿವ ಆಚಾರ್ಯ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದವರು ಪುತ್ತೂರಿನಿಂದ ವಾಪಾಸು ತಮ್ಮ ಮನೆಗೆ ಬರುವ ವೇಳೆ ಬಿಸಿರೋಡಿನ ಅಜ್ಜಿಬೆಟ್ಟು ಕ್ರಾಸ್ ಸಮೀಪದಲ್ಲಿ ಈ ಅವಘಡ ಸಂಭವಿಸಿದ್ದು, ಚಾಲಕನ ಅಜಾಗರೂಕತೆಯಿಂದ ಅನಾಹುತ ನಡೆದಿದೆ ಎನ್ನಲಾಗಿದೆ. ಕಾರಿನಲ್ಲಿ ಒಂದೇ ಮನೆಯವರಾದ 4 ಜನ ಪ್ರಯಾಣಿಸುತ್ತಿದ್ದು, ಅದರಲ್ಲಿ ಸುರೇಶ್ ಆಚಾರ್ಯ, ಮಗ ಗಣೇಶ್ ಆಚಾರ್ಯ ಅವರಿಗೆ ಅಲ್ಪಸ್ವಲ್ಪ ಗಾಯಗಳಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದ್ರೆ ಅಪಘಾತದಲ್ಲಿ ಗಂಭೀರವಾಗಿ ತಲೆಗೆ ಗಾಯವಾಗಿದ್ದ ಸದಾಶಿವ ಅವರನ್ನು ಕೈಕಂಬ ಪರ್ಲಿಯಾ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ರು. ಇನ್ನೂ ಈಬಗ್ಗೆ ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.