Recent Posts

Monday, January 27, 2025
ಸುದ್ದಿ

ಯುದ್ದ ವಿಮಾನವೇರಿ ವಾಯುಯಾನ ನಡೆಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು –ಕಹಳೆ ನ್ಯೂಸ್

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ದ್ರೌಪದಿ ಮುರ್ಮು ಅವರು ಇಂದು ಹೊಸ ದಾಖಲೆಯೊಂದನ್ನು ಬರೆದಿದ್ದಾರೆ.
ದ್ರೌಪದಿ ಮುರ್ಮು ಅವರು ಏಪ್ರಿಲ್ 6 ರಿಂದ 8 ರವರೆಗೆ ಅಸ್ಸಾಂಗೆ ಭೇಟಿ ನೀಡಿದ್ದಾರೆ. ಈ ವೇಳೆ ಅಸ್ಸಾಂನ ತೇಜ್‌ಪುರ ವಾಯುಪಡೆ ನಿಲ್ದಾಣಕ್ಕೆ ಭೇಟಿ ನೀಡಿದ್ದು, ಯುದ್ಧ ವಿಮಾನದಲ್ಲಿ ಕುಳಿತು ಪ್ರಯಾಣಿಸಿದ್ದಾರೆ.

ಅಸ್ಸಾಂನ ತೇಜ್‌ಪುರ ವಾಯುಪಡೆ ನಿಲ್ದಾಣಕ್ಕೆ ಭೇಟಿ ನೀಡಿ ಸಂದರ್ಭದಲ್ಲಿ ಸುಖೋಯ್ 30 ಎಂಕೆಐ ಯುದ್ಧ ವಿಮಾನದಲ್ಲಿ ಕುಳಿತು ವಾಯುಯಾನ ನಡೆಸಿದ್ದಾರೆ. ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ಭಾರತದ 2 ನೇ ರಾಷ್ಟ್ರಪತಿ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಈ ಮೊದಲು ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಯುದ್ಧ ವಿಮಾನ ಏರುವ ಮೂಲಕ ಆಕಾಶದಲ್ಲಿ ಹಾರಾಟ ನಡೆಸಿದ್ದರು. 2009 ರಲ್ಲಿ ಸುಖೋಯ್ 30 ಎಂಕೆಐಯಲ್ಲಿ ತೆರಳುವ ಮೂಲಕ ಹೆಗ್ಗಳಿಕೆ ಪಾತ್ರರಾಗಿದ್ದರು.