Thursday, January 23, 2025
ಸುದ್ದಿ

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು – ಕಹಳೆ ನ್ಯೂಸ್

ಬಂಟ್ವಾಳ: ಚಾಲಕನ ನಿಯಂತ್ರಣ ಕಳೆದು ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದು ಪಲ್ಟಿಯಾದ ಕಾರು ಬೈಕಿಗೆ ಡಿಕ್ಕಿಯಾಗಿ ಬೈಕ್ ಸವಾರ ಸಹಿತ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಫರಂಗಿಪೇಟೆ ಎಂಬಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬಿಸಿರೋಡಿನಿಂದ ಮಂಗಳೂರು ಕಡೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ಕಳೆದು ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಬಳಿಕ ಬೈಕಿಗೆ ಡಿಕ್ಕಿಯಾಗಿದೆ.

ಘಟನೆಯಲ್ಲಿ ಪ್ರದೀಪ್ ಸೋಮನಾಥ ಬೆಳ್ಚಾಡ, ಕಸ್ತೂರಿ, ಸಲೋರಿವಿನಯಕುಮಾರ್, ಕಿಶೋರಿವಿನಯಕುಮಾರ್ ಎಂಬವರು ಗಾಯಗೊಂಡಿದ್ದು ಇವರ ಪೂರ್ಣವಾದ ವಿವರ ಇನ್ನೂ ಕೂಡ ತಿಳಿದುಬಂದಿಲ್ಲ.
ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೊಲೀಸರು ಬೇಟಿ ನೀಡಿದ್ದಾರೆ.