ಉಡುಪಿ, : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ರಜತ ಮಹೋತ್ಸವ ಸಮಿತಿಯ ಆಶ್ರಯದಲ್ಲಿ ರಜತ ಮಹೋತ್ಸವದ ಪ್ರಯುಕ್ತ ಉಡುಪಿ ಗಾಂಧಿ ಆಸ್ಪತ್ರೆ ಹಾಗೂ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಸಂಘದ ಸ್ಥಾಪನಾ ದಿನಾಚರಣೆಯನ್ನು ಎ.12ರಂದು ಬೆಳಗ್ಗೆ 10.30ಕ್ಕೆ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿದೆ.
ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಕಾರ್ಯಕ್ರಮವನ್ನು ಹಿರಿಯ ಸಾಹಿತಿ ವೈದೇಹಿ ಉದ್ಘಾಟಿಸಲಿರುವರು. ಸ್ಥಾಪನಾ ದಿನಾಚರಣೆ ಕುರಿತು ಸಂಘದ ಸ್ಥಾಪಕಾ ಕೋಶಾಧಿಕಾರಿ ಹಾಗೂ ಮಂಗಳೂರು ವಿಜಯ ಕರ್ನಾಟಕ ಪತ್ರಿಕೆಯ ಪ್ರಧಾನ ವರದಿಗಾರ ಮಾತನಾಡಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಸಂಘದ ಮಾಜಿ ಅಧ್ಯಕ್ಷರುಗಳಾದ ಎನ್.ಗುರುರಾಜ್, ದಿನೇಶ್ ಕಿಣಿ ಅಲೆವೂರು, ಕಿರಣ್ ಮಂಜನಬೈಲು, ಗೋಕುಲ್‌ದಾಸ್ ಪೈ, ಜಯಕರ ಸುವರ್ಣ, ಗಣೇಶ್ ಪ್ರಸಾದ್ ಪಾಂಡೇಲು ಅವರನ್ನು ಸನ್ಮಾನಿಸಲಾಗು ವುದು. ಸಂಘದ ಫೇಸ್‌ಬುಕ್ ಪೇಜ್ ಅನಾವರಣಗೊಳಿಸಲಾಗುವುದು ಎಂದು ಅವರು ತಿಳಿಸಿದರು.
ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ವಹಿಸಲಿರುವರು. ರಜತ ಮಹೋತ್ಸವ ಸಮಿತಿಯ ಸಂಚಾಲಕ ಮುಹಮ್ಮದ್ ಶರೀಫ್, ಇಂಡಿಯನ್ ಫೆಡರೇಶನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್ ರಾಷ್ಟ್ರೀಯ ಸಮಿತಿ ಸದಸ್ಯ ಅರುಣ್ ಕುಮಾರ್ ಶಿರೂರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ಪತ್ರಿಕಾ ಭವನ ಸಮಿತಿಯ ಸಂಚಾಲಕ ಅಜಿತ್ ಆರಾಡಿ ಗೌರವ ಉಪಸ್ಥಿತರಿರುವರು.
ಪತ್ರಿಕಾಗೋಷ್ಠಿಯಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ಪತ್ರಿಕಾ ಭವನ ಸಮಿತಿಯ ಸಂಚಾಲಕ ಅಜಿತ್ ಆರಾಡಿ ಉಪಸ್ಥಿತರಿದ್ದರು
You Might Also Like
ದಕ್ಷಿಣ ಕನ್ನಡ ಜಿಲ್ಲಾಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪುಸ್ತಕ ಪ್ರದರ್ಶನ ,ಮಾರಾಟ ಮತ್ತು ಇತರ ಮಳಿಗೆಗಳಿಗೆ ಅವಕಾಶ -ಕಹಳೆ ನ್ಯೂಸ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ 27ನೇ ಕನ್ನಡ ಸಾಹಿತ್ಯ ಸಮ್ಮೇಳನ ಇದೇ ಬರುವ ಫೆಬ್ರವರಿ 21 ಮತ್ತು 22ರಂದು ಮಂಗಳೂರು ವಿಶ್ವವಿದ್ಯಾನಿಲಯದ, ಮಂಗಳ ಸಭಾಂಗಣದಲ್ಲಿ ಡಾ.ಪ್ರಭಾಕರ ಶಿಶಿಲ...
ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ ಮೂಡಬಿದ್ರೆ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಿಂದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ – ಕಹಳೆ ನ್ಯೂಸ್
ಮೂಡಬಿದ್ರೆ: ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ ಮೂಡಬಿದ್ರೆ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಿಂದ ರಸ್ತೆ ಸುರಕ್ಷತಾ ಅಭಿಯಾನ. ಕಾರ್ಯಕ್ರಮ ಮೂಡಬಿದ್ರೆ ಪೊಲೀಸರ ಸಹಕಾರದೊಂದಿಗೆ ನಡೆಯಿತು. ಕಾರ್ಯಕ್ರಮವನ್ನು ಮುಖ್ಯ...
ಕರ್ನಾಟಕ ಶಾಸ್ತ್ರೀಯ ಸಂಗೀತ ಪರೀಕ್ಷೆಯಲ್ಲಿ ದೀಕ್ಷಿತ್ ಕುಮಾರ್ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ-ಕಹಳೆ ನ್ಯೂಸ್
ಪುತ್ತೂರು : ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ವತಿಯಿಂದ ಜುಲೈ-ಆಗಸ್ಟ್ 2024ರಲ್ಲಿ ನಡೆದ ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್...
ಮಗಳ ಹುಟ್ಟುಹಬ್ಬವನ್ನು ವಿಶೇಷ ರೀತಿಯಲ್ಲಿ ಆಚರಿಸಿದ ಉದ್ಯಮಿ ಲ| ಗಣೇಶ್ ಪೂಜಾರಿ-ಕಹಳೆ ನ್ಯೂಸ್
ಬಂಟ್ವಾಳ : ಹುಟ್ಟು ಹಬ್ಬದ ಆಚರಣೆಯಲ್ಲೂ ಪಾಶ್ಚ್ಯಾತ್ಯ ಸಂಸ್ಕೃತಿಯು ಆವರಿಸಿಕೊಂಡಿರುವ ಕಾಲಘಟ್ಟ ವಿದು. ಆಪ್ತೇಷ್ಟರನ್ನು ಕರೆದು ವೈಭವೋಪೇತವಾಗಿ ಹುಟ್ಟು ಹಬ್ಬವನ್ನು ಆಚರಿಸುವುದು ಎಲ್ಲಾ ಕಡೆಯೂ ಪ್ರಚಲಿತದಲ್ಲಿದೆ. ಆದರೆ...