‘ಪಕ್ಷಕ್ಕಾಗಿ ದುಡಿದ ನನ್ನನ್ನು ಗೌರವಿಸುವ ಕ್ರಮ ಇದಲ್ಲ’ : ನೋವಿನೊಂದಿಗೆ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಚಿವ ಎಸ್. ಅಂಗಾರ – ಕಹಳೆ ನ್ಯೂಸ್
ಅಭಿವೃದ್ದಿಯ ಮೂಲಕ ಸುಳ್ಯದ ಬಂಗಾರವೆಂದು ಖ್ಯಾತಿ ಪಡೆದಿದ್ದ ಸುಳ್ಯ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ, ಸಚಿವ ಎಸ್. ಅಂಗಾರ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ್ದಾರೆ.
ಸುಳ್ಯ ಬಿಜೆಪಿ ಅಭ್ಯರ್ಥಿ ಘೋಷಣೆಯಾಗಿದ್ದು, ಎಸ್ ಅಂಗಾರ ಅವರಿಗೆ ಟಿಕೆಟ್ ಕೈ ತಪ್ಪಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಇವರು ‘ಪಕ್ಷ ಟಿಕೆಟ್ ನೀಡದ ಕುರಿತು ನನ್ನ ಅಸಮಾಧಾನವಲ್ಲ. ಆದರೆ ಇಷ್ಟು ವರ್ಷ ಪಕ್ಷಕ್ಕಾಗಿ ಮತ್ತು ಸಮಾಜಕ್ಕಾಗಿ ಯಾವುದೇ ಕಪ್ಪು ಚುಕ್ಕೆ ಬಾರದಂತೆ ಮಾಡಿದ ಸೇವೆಯನ್ನು ಗೌರವಿಸುವ ಕ್ರಮ ಇದಲ್ಲ. ಪ್ರಾಮಾಣಿಕ ರಾಜಕಾರಣಕ್ಕೆ ಇಂದು ಬೆಲೆ ಇಲ್ಲದಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ನನ್ನ ಪ್ರಾಮಾಣಿಕತೆಯೇ ನನಗೆ ಮುಳುವಾಗಿದೆ. ಲಾಬಿ ಮಾಡುವುದು ನನ್ನ ಗುಣವಾಗಿರಲಿಲ್ಲ. ನಾನು ಇನ್ನು ರಾಜಕಾರಣದಲ್ಲಿಲ್ಲ. ಚುನಾವಣಾ ಪ್ರಚಾರ ಕಣದಲ್ಲೂ ಇಲ್ಲ. ಹೊಸ ಅಭ್ಯರ್ಥಿ ಮತ್ತು ಅವರ ಗೆಲುವನ್ನು ಪಕ್ಷ ನೋಡಿಕೊಳ್ಳಬಹುದು ಎಂದು ಹೇಳಿದರು.