Sunday, January 19, 2025
ಸುದ್ದಿ

ಕೆಎಸ್.ಆರ್.ಟಿ.ಸಿ. ಬಸ್ ಬೈಕ್ ಗೆ ಡಿಕ್ಕಿ : ಬೈಕ್ ಸವಾರ ಮೃತ್ಯು – ಕಹಳೆ ನ್ಯೂಸ್

ಬಂಟ್ವಾಳ; ಕೆಎಸ್.ಆರ್.ಟಿ.ಸಿ. ಬಸ್ ಬೈಕ್ ಗೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಬಂಟ್ವಾಳ ಸಮೀಪದ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸರಪಾಡಿ ನಿವಾಸಿ ಅವಿವಾಹಿತ ಸೇಸಪ್ಪ ಯಾನೆ ಶ್ರೇಯಸ್ (30) ಮೃತಪಟ್ಟ ಯುವಕ. ಖಾಸಗಿ ಕಂಪೆನಿಯೊAದರಲ್ಲಿ ಚಾಲಕ ವೃತ್ತಿ ಮಾಡುತ್ತಿದ್ದ ಬಡಕುಟುಂಬದ ಯುವಕನಾಗಿದ್ದು, ಸಂಜೆ ವೇಳೆ ವೃತ್ತಿ ಮುಗಿಸಿ ಮನೆಗೆ ವಾಪಾಸು ಬೈಕಿನಲ್ಲಿ ಹೋಗುವ ವೇಳೆ ಅಪಘಾತ ಸಂಭವಿಸಿದೆ.

ಬಿಸಿರೋಡು ಕಡೆಯಿಂದ ಧರ್ಮಸ್ಥಳ ಹೆದ್ದಾರಿಯಲ್ಲಿ ಶ್ರೇಯಸ್ ಸರಪಾಡಿ ಮನೆಗೆ ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಧರ್ಮಸ್ಥಳ ಕಡೆಯಿಂದ ವೇಗವಾಗಿ ಬರುತ್ತಿದ್ದ ಸರಕಾರಿ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಎದುರಿನಿಂದ ಬೈಕಿಗೆ ಡಿಕ್ಕಿಯಾಗಿದೆ.

ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ಜಖಂಗೊAಡಿದ್ದು, ಯುವಕ ಗಂಭೀರವಾಗಿ ಗಾಯಗೊಂಡಿದ್ದ, ಅಪಘಾತಕ್ಕೆ ಒಳಗಾದ ಸ್ಥಳದಲ್ಲಿ ರಕ್ತದೋಕುಳಿ ಹರಿದಿತ್ತು. ಕೂಡಲೇ ಈತನನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕೊಂಡು ಹೋಗಿದ್ದರು. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಈತನನ್ನು 108 ಅಂಬ್ಯುಲೆನ್ಸ್ ವಾಹನದಲ್ಲಿ ಮಂಗಳೂರಿಗೆ ಸಾಗಿಸಲಾಯಿತಾದರೂ ದಾರಿ ಮಧ್ಯೆ ಈತ ಕೊನೆಯುಸಿರೆಳೆದಿದ್ದಾನೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಘಟನಾ ಸ್ಥಳಕ್ಕೆ ಟ್ರಾಫಿಕ್ ಎಸ್.ಐ.ಮೂರ್ತಿ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅಪಘಾತ ಸ್ಪಾಟ್ ಅಗುತ್ತಿದೆ ಧರ್ಮಸ್ಥಳ -ಕಡೂರು ಹೆದ್ದಾರಿ: ಆತಂಕದಲ್ಲಿ ಸವಾರರು ಬಿಸಿರೋಡು -ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕಾಮಗಾರಿ ಮುಗಿದ ಅಗಲೀಕರಣಗೊಂಡ ಬಳಿಕ ಈ ಭಾಗದಲ್ಲಿ ಅನೇಕ ಅಪಘಾತಗಳು ಸಂಭವಿಸಿದ್ದಲ್ಲದೆ ಸಾವುನೋವುಗಳು ಸಂಭವಿಸಿದವು.

ಇತ್ತೀಚಿನ ದಿನಗಳಲ್ಲಿ ಇದೊಂದು ಅಪಘಾತವಲಯವಾಗಿ ಮಾರ್ಪಾಡುಗೊಂಡಿರುವ ಬಗ್ಗೆ ವಾಹನ ಸವಾರರಿಗೆ ನಡುಕ ಉಂಟಾಗಿದೆ.

ಈ ಕಾರಣಕ್ಕಾಗಿ ತಿರುವು ಹಾಗೂ ಅಗತ್ಯ ವಿರುವ ಕಡೆಗಳಲ್ಲಿ ಅಪಘಾತ ತಪ್ಪಿಸಲು ರಸ್ತೆಯಲ್ಲಿ ಸ್ಪೀಡ್ ಕಂಟ್ರೋಲ್ ಗಳನ್ನು ಹಾಕುವಂತೆ ಮತ್ತು ಸೂಚನ ಫಲಕಗಳನ್ನು ಹಾಕುವಂತೆ ಇತ್ತೀಚಿಗೆ ಅಧಿಕಾರಿಗಳ ಜೊತೆ ಸ್ಥಳಕ್ಕೆ ಬೇಟಿ ನೀಡಿದ ಶಾಸಕರು ಸೂಚನೆ ನೀಡಿದ್ದರು.
ಆದರೆ ಇಲಾಖೆಯವರು ಎಲ್ಲಾ ಸೂಚನಾ ಕ್ರಮಗಳನ್ನು ಅಳವಡಿಸಲಾಗಿದೆಯಾದರೂ ಅಪಘಾತ ಸಂಭವಿಸುವುದು ಮಾತ್ರ ಕಡಿಮೆಯಾಗಿಲ್ಲ ಎಂಬ ಕೂಗು ಕೇಳಿ ಬರುತ್ತಿದೆ.