ಸುಳ್ಯ : ಎ 14ರಂದು ಮಾಣಿ ಮತ್ತು ಮೈಸೂರು ರಾ.ಹೆದ್ದಾರಿಯ ಸಂಪಾಜೆ ಬಳಿ ಕೆ.ಎಸ್.ಆರ್ ಟಿ. ಸಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ ನಡೆದಿದ್ದು ಮಗು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ.
ಸುಳ್ಯದಿಂದ ವಿರಾಜಪೇಟೆಗೆ ತೆರಳುತ್ತಿದ್ದ ಬಸ್ ಹಾಗೂ ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿರುವುದಾಗಿ ತಿಳಿದುಬಂದಿದೆ. ಮಡಿಕೇರಿ ಕಡೆಯಿಂದ ಬಂದ ಶಿಪ್ಟ್ ಕಾರು ಸಂಪಾಜೆ ಪೆಟ್ರೋಲ್ ಪಂಪ್‌ನಿಂದ ಪೆಟ್ರೋಲ್ ಹಾಕಿ ರಸ್ತೆಗೆ ಇಳಿಯುತ್ತಿದ್ದಂತೆ ಸುಳ್ಯದಿಂದ ಮಡಿಕೇರಿಗೆ ಹೋಗುತ್ತಿದ್ದ ಕೆಸ್ ಆರ್ ಟಿ ಸಿ ಬಸ್ ಡಿಕ್ಕಿಯಾಗಿದೆ.
ಘಟನೆಯಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ಹೇಳಲಾಗಿದ್ದು, ಗಾಯಗೊಂಡವರನ್ನು ಸುಳ್ಯದ ಆಸ್ಪತ್ರೆಗೆ ಸಾಗಿಸಲಾಗಿತ್ತು.
ಮೂವರು ಮಕ್ಕಳು, ಇಬ್ಬರು ಮಹಿಳೆಯರು, ಓರ್ವ ಗಂಡಸು ಮೃತಪಟ್ಟಿದ್ದಾರೆ. ಮೃತದೇಹ ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ಹಾಗೂ ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಮೃತರ ಗುರುತು ಪತ್ತೆಯಾಗಿಲ್ಲ.
ಕಾರಿನಲ್ಲಿ ಒಟ್ಟು ೮ ಮಂದಿ ಇದ್ದರು ಎಂದು ಹೇಳಲಾಗಿದೆ, ಒಬ್ಬ ಗಂಡಸು ಮತ್ತು ಮಗು ಗಂಭೀರ ಸ್ಥಿತಿಯಲ್ಲಿ ಸುಳ್ಯ ಕೆ ವಿ ಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರಿನಲ್ಲಿದ್ದವರು ಮಂಡ್ಯ ಮೂಲದ ಮಳವಳ್ಳಿಯವರು ಎಂದು ಹೇಳಲಾಗಿದೆ.