ಬಂಟ್ವಾಳ ಜಕ್ರಿಬೆಟ್ಟುವಿನಲ್ಲಿ ಸ್ಕೂಟರಿಗೆ ಸರ್ಕಾರಿ ಬಸ್ ಡಿಕ್ಕಿ – ಸವಾರ ಸ್ಥಳದಲ್ಲೇ ಮೃತ್ಯು..!- ಕಹಳೆ ನ್ಯೂಸ್
ಬಂಟ್ವಾಳ : ಕೆ.ಎಸ್.ಆರ್.ಟಿ.ಸಿ.ಬಸ್ ಹಿಂಬದಿಯಿಂದ ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ.
ಭಂಡಾರಿಬೆಟ್ಟು ನಿವಾಸಿ ಡೊಂಬಯ್ಯ ಮೂಲ್ಯ (60) ಮೃತಪಟ್ಟ ವ್ಯಕ್ತಿ. ಅವರು ಬಂಟ್ವಾಳ ಬೈಪಾಸ್ ರಸ್ತೆಯಲ್ಲಿ ಜಕ್ರಿಬೆಟ್ಟು ಕಡೆಯಿಂದ ಬಿಸಿರೋಡು ಕಡೆಗೆ ಬರುತ್ತಿದ್ದ ಸಂದರ್ಭದಲ್ಲಿ ಧರ್ಮಸ್ಥಳ ಕಡೆಯಿಂದ ಬರುತ್ತಿದ್ದ ಸರಕಾರಿ ಬಸ್ ಹಿಂಬದಿಯಿಂದಸ್ಕೂಟರ್ ಗೆ ಡಿಕ್ಕಿಹೊಡೆದಿದೆ.ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ಘಟನೆ ನಡೆದ ಕೂಡಲೇ ಬಿಜೆಪಿ ಯುವ ಮೋರ್ಚಾದ ಕಾರ್ಯದರ್ಶಿ ದಿನೇಶ್ ದಂಬೆದಾರ್ ಅವರು ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಮಾಡಿದ್ದಾರೆ. ಆದರೆ ಅದಾಗಲೇ ಮೃತಪಟ್ಟ ಬಗ್ಗೆ ಮಾಹಿತಿ ನೀಡಿದ್ದಾರೆ.
ಡೊಂಬಯ್ಯ ಅವರು ಅವರ ಸಂಬAಧಿಕರ ಮನೆಯಲ್ಲಿ ಸಂಕ್ರಮಣದ ದಿನದಂದು ದೈವದ ಕೆಲಸಕ್ಕೆ ಹೂ ತರಲೆಂದು ಬಿಸಿರೋಡು ಕಡೆಗೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಡೊಂಬಯ್ಯ ಅವರು ಬಿಸಿರೋಡು ಕುಲಾಲ ಸಮುದಾಯ ಭವನದಲ್ಲಿ ಅನೇಕ ವರ್ಷಗಳಿಂದ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಚಾಲಕನ ಅಜಾಗಕರೂಕತೆಯ ಚಾಲನೆಯಿಂದ ಈ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಅಪಘಾತ ಸಂಭವಿಸಿದ ಕೂಡಲೇ ಬಸ್ ಚಾಲಕ ಬಸ್ ನಿಂದ ಇಳಿದು ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ. ಅಪಘಾತ ನಡೆದ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೊಲೀಸರು ಬೇಟಿನೀಡಿದ್ದಾರೆ.