Saturday, January 25, 2025
ಸುದ್ದಿ

ಪುತ್ತೂರಿನಿಂದ ಶಕುಂತಲಾ ಶೆಟ್ಟಿಗೆ ಟಿಕೆಟ್ ನೀಡದ ಹಿನ್ನಲೆ ; ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾರದಾ ಅರಸ್ ಸೇರಿದಂತೆ ಮೂವರು ನಾಯಕಿಯರು ರಾಜೀನಾಮೆ- ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ಶಾಸಕಿ ಶಕುಂತಲಾ ಟಿ.ಶೆಟ್ಟಿಯವರಿಗೆ ಅವಕಾಶ ದೊರೆಯದೇ ಇರುವ ಹಿನ್ನೆಲೆಯಲ್ಲಿ ಬ್ಲಾಕ್‌ ಕಾಂಗ್ರೆಸ್‌ ಮಹಿಳಾ ಘಟಕದ ಅಧ್ಯಕ್ಷೆ ಶಾರದಾ ಅರಸ್ ಮತ್ತು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷೆ ವಿಶಾಲಾಕ್ಷಿ ಬನ್ನೂರು, ಶುಭ ಮಾಲಿನಿ ಮಲ್ಲಿ ಅವರು ಪಕ್ಷದ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಾರಿ ಶಕುಂತಲಾ ಟಿ.ಶೆಟ್ಟಿಯವರಿಗೆ ಅವಕಾಶ ದೊರೆಯದೇ ಇದ್ದಲ್ಲಿ ಮಹಿಳಾ ಕಾಂಗ್ರೆಸ್‌ನ ಎಲ್ಲ ಪದಾಧಿಕಾರಿಗಳೂ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಶಾರದಾ ಅರಸ್ ಅವರು ಪತ್ರಿಕಾಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದ್ದರು. ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅಶೋಕ್ ಕುಮಾರ್ ರೈ ಕೋಡಿಂಬಾಡಿ ಅವರಿಗೆ ಪಕ್ಷ ಅವಕಾಶ ನೀಡಿರುವ ಬೆನ್ನಲ್ಲೇ ಶಾರದಾ ಅರಸ್ ಮತ್ತು ವಿಶಾಲಾಕ್ಷಿ ಬನ್ನೂರು ಅವರು ರಾಜೀನಾಮೆ ನೀಡಿದ್ದಾರೆ. ಮುಂದಕ್ಕೆ ಏನೆಲ್ಲಾ ರಾಜಕೀಯ ಬೆಳವಣಿಗೆಗಳು ನಡೆಯುತ್ತದೋ ಕಾದು ನೋಡಬೇಕಾಗಿದೆ.