Saturday, January 25, 2025
ಸುದ್ದಿ

ನವ ಬೆಳ್ತಂಗಡಿಯ ಹರಿಕಾರ ಹರೀಶ್ ಪೂಂಜ ನಾಮಪತ್ರ ಸಲ್ಲಿಕೆ –ಕಹಳೆ ನ್ಯೂಸ್

ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಹರೀಶ್ ಪೂಂಜ ನಾಮಪತ್ರ ಸಲ್ಲಿಸಿದ್ದಾರೆ.
ವಿಧಾನಸಭಾ ಚುನಾವಣೆಗೆ ಬೆಳ್ತಂಗಡಿ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ, ಹರೀಶ್ ಪೂಂಜರವರು ಇಂದು ಬೆಳ್ತಂಗಡಿ ಚುನಾವಣಾ ಅಧಿಕಾರಿ ಯೋಗೇಶ್ ಹೆಚ್.ಆರ್ ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ. 5 ಸಾವಿರಕ್ಕೂ ಅಧಿಕ ಕಾರ್ಯಕರ್ತರ ಸಮ್ಮುಖದಲ್ಲಿ ನವ ಬೆಳ್ತಂಗಡಿಯ ಹರಿಕಾರ ಹರೀಶ್ ಪೂಂಜ ಚುನಾವಣಾ ಅಖಾಡಕ್ಕೆ ಕಾಲಿಟ್ಟಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್, ಹಿರಿಯ ವಕೀಲ ಸುಬ್ರಹ್ಮಣ್ಯ ಕುಮಾರ್ ಅಗರ್ತಮತ್ತು ಹಿರಿಯ ಮುಂದಾಳು ಕುಶಾಲಪ್ಪ ಗೌಡ ಪೂವಾಜೆ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ಹಾಗೂ ಮತ್ತಿತರರು ಉಪಸ್ಥಿತರಿದ್ದರು.