ಮಂಗಳೂರು: ಮಂಗಳೂರಿನಿಂದ ಬೆಂಗಳೂರಿಗೆ ಸಂಪರ್ಕಿಸುವ ಚಾರ್ಮಾಡಿ ಘಾಟಿ ಸಂಪೂರ್ಣ ಕಿತ್ತುಹೋಗಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಚಾಲಕರು ಜೀವ ಕೈಯಲ್ಲಿ ಹಿಡಿದು ಸಂಚಾರಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ.
ಶಿರಾಡಿ ಘಾಟಿ, ಸಂಪಾಜೆ ಘಾಟಿ ಹೆದ್ದಾರಿ ಬಂದ್ ಆದ ಸಂದರ್ಭದಲ್ಲಿ ಚಾರ್ಮಾಡಿ ಘಾಟಿ ಮಾತ್ರ ಸಂಪರ್ಕ ರಸ್ತೆಯಾಗಿ ಉಳಿದಿತ್ತು. ಇದರಿಂದ ಭಾರೀ ಸಂಖ್ಯೆಯಲ್ಲಿ ವಾಹನಗಳು ಸಂಚರಿಸಿದ ಕಾರಣ ಘಾಟಿ ರಸ್ತೆ ಸಂಪೂರ್ಣ ಹಾಳಾಗಿದೆ. ಅಪಾಯಕಾರಿ ತಿರುವುಗಳಲ್ಲಿ ರಸ್ತೆ ಡಾಂಬರು ಕಿತ್ತು ಹೋಗಿ ಗುಂಡಿಗಳು ಬಿದ್ದಿದೆ.
https://youtu.be/8SMkCExfssI
ಸದ್ಯ ಶಿರಾಡಿ ಘಾಟ್ ನಲ್ಲಿ ಲಘು ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶವಿದ್ದು, 6 ಚಕ್ರದ ಘನ ವಾಹನಗಳು ಚಾರ್ಮಾಡಿ ಘಾಟ್ ಮೂಲಕವೇ ಸಂಚರಿಸುತ್ತಿದೆ.
https://youtu.be/0F3Y1lgu8zY
ಚಾರ್ಮಾಡಿ ಘಾಟ್ ಅತ್ಯಂತ ಕಿರಿದಾದ ರಸ್ತೆಯಾಗಿದ್ದರಿಂದ ವಾಹನಗಳು ಅಪಾಯಕಾರಿ ಸನ್ನಿವೇಶದಲ್ಲಿ ಚಾಲನೆ ಮಾಡುವ ಅನಿವಾರ್ಯ ಸೃಷ್ಟಿಯಾಗಿದೆ. ಹೀಗಾಗಿ ಅಪಾಯ ಸಂಭವಿಸುವ ಮುನ್ನ ಕನಿಷ್ಠ ರಸ್ತೆಗೆ ತೇಪೆ ಹಾಕುವ ಕಾರ್ಯ ಮಾಡಬೇಕಿದೆ ಎಂದು ವಾಹನ ಸವಾರರು ಆಗ್ರಹಿಸಿದ್ದಾರೆ.