Thursday, January 23, 2025
ಉಡುಪಿರಾಜಕೀಯಸುದ್ದಿ

ಕಾಪು ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ನಾಮಪತ್ರ ಸಲ್ಲಿಕೆ- -ಕಹಳೆ ನ್ಯೂಸ್

ಕಾಪು ವಿಧಾನಸಭೆಗೆ ಬಿಜೆಪಿ ಅಭ್ಯರ್ಥಿಯಾಗಿ ಗುರ್ಮೆ ಸುರೇಶ್ ಶೆಟ್ಟಿ ಸೋಮವಾರ ನಾಮಪತ್ರ ಸಲ್ಲಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸಹಸ್ರ–ಸಹಸ್ರ ಸಂಖ್ಯೆಯಲ್ಲಿ ಕಾಪು ಕ್ಷೇತ್ರದ ಕಾರ್ಯಕರ್ತರು, ಅಭಿಮಾನಿಗಳು ಮತ್ತು ನಾಯಕರ ಜೊತೆಗೂಡಿ ಕಾಪು ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನದಿಂದ ಕಾಪು ತಾಲೂಕು ಕಚೇರಿಗೆ ತೆರಳಿದ ಗುರ್ಮೆ ಸುರೇಶ್ ಶೆಟ್ಟಿ ತಮ್ಮ ನಾಮಪತ್ರ ಸಲ್ಲಿಸಿದರು.

ಕಾಪು ವಿಧಾನ ಸಭಾ ಕ್ಷೇತ್ರದಲ್ಲಿ ಗೆಲುವು ನಮ್ಮದೇ ಎಂಬ ಅಭಿಮಾನಿ ಕಾರ್ಯಕರ್ತರ ನಂಬಿಕೆ ಮತ್ತು ವಿಶ್ವಾಸ ತಮ್ಮಲ್ಲಿ ಅಪಾರ ಶಕ್ತಿಯನ್ನು ತುಂಬಿದೆ ಎಂದು ಈ ಸಂದರ್ಭ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಗುರ್ಮೆ ಸುರೇಶ್ ಶೆಟ್ಟಿ ಅವರು ಹೇಳಿದರು.

ಈ ಸಂದರ್ಭದಲ್ಲಿ ರಾಜ್ಯ ಚುನಾವಣಾ ಸಹ ಪ್ರಭಾರಿ ಹಾಗೂ ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷರಾದ ಅಣ್ಣಾಮಲೈ, ಸಚಿವರುಗಳಾದ ವಿ ಸುನಿಲ್ ಕುಮಾರ್ ಮತ್ತು ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಲಾಲಾಜಿ ಮೆಂಡನ್, ರಘುಪತಿ ಭಟ್, ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಉಡುಪಿ ಬಿಜೆಪಿ ಅಭ್ಯರ್ಥಿ ಯಶಪಾಲ್ ಸುವರ್ಣ, ಕಾಪು ಕ್ಷೇತ್ರ ಬಿಜೆಪಿ ಅಧ್ಯಕ್ಷ ಶ್ರೀಕಾಂತ್ ನಾಯಕ್, ಮಂಗಳೂರು ಪ್ರಭಾರಿ ಉದಯ ಕುಮಾರ್ ಶೆಟ್ಟಿ, ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಉಸ್ತುವಾರಿ ಸುಲೋಚನಾ ಭಟ್, ಪ್ರಮುಖರಾದ ಶ್ಯಾಮಲಾ ಕುಂದರ್, ದಿನಕರ ಬಾಬು, ಕುತ್ಯಾರು ನವೀನ್ ಶೆಟ್ಟಿ, ಗೋಪಾಲಕೃಷ್ಣ ರಾವ್, ಅನಿಲ್ ಶೆಟ್ಟಿ ಮಾಂಬೆಟ್ಟು, ಶಿಲ್ಪಾ ಜಿ. ಸುವರ್ಣ, ಗೀತಾಂಜಲಿ ಸುವರ್ಣ, ವೀಣಾ ಕೆ. ಶೆಟ್ಟಿ, ಸುರೇಂದ್ರ ಪಣಿಯೂರು, ಅಂಡಾರು ದೇವಿಪ್ರಸಾದ್ ಶೆಟ್ಟಿ, ಪ್ರವೀಣ್ ಗುರ್ಮೆ ಮೊದಲಾದವರು ಪಾದಯಾತ್ರೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.