Saturday, April 5, 2025
ಕ್ರೈಮ್ರಾಜಕೀಯರಾಜ್ಯಸುದ್ದಿಹುಬ್ಬಳ್ಳಿ

ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷನ ಬರ್ಬರ ಹತ್ಯೆ – ಕಹಳೆ ನ್ಯೂಸ್

ಧಾರವಾಡ: ಬಿಜೆಪಿ (BJP) ಧಾರವಾಡ ಜಿಲ್ಲಾ ಯುವ ಮೋರ್ಚಾ (Yuva Morcha) ಉಪಾಧ್ಯಕ್ಷನನ್ನು ಬರ್ಬರ ಹತ್ಯೆ ಮಾಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಧಾರವಾಡ ತಾಲೂಕಿನ ಕೋಟೂರು ಗ್ರಾಮದಲ್ಲಿ ಪ್ರವೀಣ ಕಮ್ಮಾರ (Pravena Kammara) ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ತಡ ರಾತ್ರಿ ಪ್ರವೀಣ ಕಮ್ಮಾರನ ಹೊಟ್ಟೆಗೆ ಚಾಕು ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಪ್ರವೀಣ ಅವರನ್ನು ಧಾರವಾಡದ ಖಾಸಗಿ ಆಸ್ಪತ್ರಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಗರಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ