Wednesday, January 22, 2025
ಸುದ್ದಿ

ಯವಕನೋರ್ವ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತ್ಯು – ಕಹಳೆ ನ್ಯೂಸ್

ಬಂಟ್ವಾಳ : ಕರ್ತವ್ಯದ ವೇಳೆ ವ್ಯಕ್ತಿಯೋರ್ವ ಮಹಡಿ ಮೇಲಿನಿಂದ ಆಕಸ್ಮಿಕವಾಗಿ ಕೆಳಕ್ಕೆ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಮಾಡಮೆ ಎಂಬಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸಿದ್ದಕಟ್ಟೆ ದೇವಸ ನಿವಾಸಿ ದುರ್ಗಾಪ್ರಸಾದ್ (32 ) ಎಂಬವರು ಮೃತಪಟ್ಟ ವ್ಯಕ್ತಿ. ಮಾಡಮೆಯಲ್ಲಿ ಮನೆಯೊಂದರಲ್ಲಿ ಪ್ಲಬಿಂಗ್ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಮೇಲಿನಿಂದ ಕೆಳಕ್ಕೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.