Wednesday, January 22, 2025
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಬದಲಾವಣೆಯತ್ತ ಉಳ್ಳಾಲ – ಖಾದರ್ ಕೈಯಿಂದ ತಪ್ಪುತ್ತಾ ಕೈ ಭದ್ರಕೋಟೆ…!? ; ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ ನಾಮಪತ್ರ ಸಲ್ಲಿಕೆ – ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿದ ಬಿಜೆಪಿ ಕಾರ್ಯಕರ್ತರು – ಕಹಳೆ ನ್ಯೂಸ್

ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ ಗುರುವಾರ ನಾಮ ಪತ್ರ ಸಲ್ಲಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸತೀಶ್ ಕುಂಪಲ ಅವರು ಕುಂಪಲದ ಶ್ರೀ ಬಾಲಕೃಷ್ಣ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ಮುನ್ನೂರು ದೆಕ್ಕಾಡು ಕೊರಗಜ್ಜನ ಕ್ಷೇತ್ರ, ಮಾಡೂರು ದೈವಸ್ಥಾನದಲ್ಲಿ ಪ್ರಾರ್ಥನೆ ನಡೆಸಿದ ಬಳಿಕ ಉಳ್ಳಾಲ ಅಬ್ಬಕ್ಕ ಸರ್ಕಲ್‍ನಲ್ಲಿ ಅಬ್ಬಕ್ಕ ಪ್ರತಿಮೆಗೆ ಮಾಲಾರ್ಪಣೆ ನಡೆಸಿದರು. ಬಳಿಕ ಉಳ್ಳಾಲದಲ್ಲಿ ನವ ಮಂಗಳೂರು ನಿರ್ಮಾತೃ ಶ್ರೀನಿವಾಸ ಮಲ್ಯ ಅವರ ಮನೆಗೆ ಭೇಟಿ ನೀಡಿದ ಬಳಿಕ ಪಂಡಿತ್‍ಹೌಸ್‍ನಲ್ಲಿರುವ ಬಿಜೆಪಿ ಚುನಾವಣಾ ಕಾರ್ಯಾಲಯದಿಂದ ಹಿರಿಯ ಮುಖಂಡರ ನೇತೃತ್ವದಲ್ಲಿ ತೊಕ್ಕೊಟ್ಟುವರೆಗೆ ಸಾವಿರಾರು ಸಂಖ್ಯೆಯ ಬಿಜೆಪಿ ಕಾರ್ಯಕರ್ತರೊಂದಿಗೆ ಬೃಹತ್ ರ್ಯಾಲಿ ತೊಕ್ಕೊಟ್ಟು ಕೇಂದ್ರ ಬಸ್ ನಿಲ್ದಾಣದವರೆಗೆ ನಡೆಯಿತು.

ಬಳಿಕ ಸಾರ್ವಜನಿಕಸಭೆಯಲ್ಲಿ ಪಕ್ಷದ ಮುಖಂಡರು ಭಾಗವಹಿಸಿದ್ದರು. ಸಾರ್ವಜನಿಕ ಸಭೆಯ ಬಳಿಕ ಮಂಗಳೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮಾರ್ಗದರ್ಶನದಲ್ಲಿ ಚುನಾವಣಾ„ಕಾರಿ ರಾಜು ಅವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಕೃಷ್ಣ ಪಾಲೆಮಾರ್, ಮಾಜಿ ಶಾಸಕ ಕೆ, ಜಯರಾಮ ಶೆಟ್ಟಿ, ರಾಜ್ಯ ಪ್ರವಾಸಿ ಪ್ರಬಾರಿ ಕುಂಟಾರು ರವೀಂಶ್ ತಂತ್ರಿ, ರಾಜಾರಾಮ ಭಟ್, ಮಹಿಳಾ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ಅಶ್ವಿನಿ ಬೆಜ್ಜ, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ರಾಜ್ಯ ಚುನಾವಣಾ ಪ್ರಭಾರಿ ಚೆನ್ನಪ್ಪ ಕೋಟ್ಯಾನ್, ಮಂಡಲ ಪ್ರಭಾರಿಗಳಾದ ಕಸ್ತೂರಿ ಪಂಜ, ರಣದೀಪ್ ಕಾಂಚನ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಮಹಿಳಾ ಅಧ್ಯಕ್ಷ ಧನಲಕ್ಮಿ ಗಟ್ಟಿ, ಜಿಲ್ಲಾ ಮುಖಂಡರಾದ ಚಂದ್ರಶೇಖರ್‍ಉಚ್ಚಿಲ್, ಚಂದ್ರಹಾಸ್ ಉಳ್ಳಾಲ್, ಚಂದ್ರಹಾಸ್ ಅಡ್ಯಂತಾಯ, ಸಂತೋಷ್ ಕುಮಾರ್ ಶೆಟ್ಟಿ ಅಸೈಗೋಳಿ, ಕಾಸರಗೋಡು ಬಿಜೆಪಿ ಜಿಲ್ಲಾ ಕಾರ್ಯದರ್ಶಿ ವಿಜಯ ರೈ, ಮಂಡಲ ಅಧ್ಯಕ್ಷ ಚಂದ್ರಹಾಸ ಪಂಡಿತ್‍ಹೌಸ್, ಚುನಾವಣಾ ನಿರ್ವಾಹಣಾ ಸಮಿತಿ ಸಂಚಾಲಕ ರವೀಂದ್ರ ಶೆಟ್ಟಿ ಉಳಿದೊಟ್ಟು, ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಹೆರಮಂತ್ ಶೆಟ್ಟಿ ದೇರಳಕಟ್ಟೆ, ನವೀನ್ ಪಾದಲ್ಪಾಡಿ ಉಪಸ್ಥಿತರಿದ್ದರು