Recent Posts

Tuesday, January 21, 2025
ಉಡುಪಿರಾಜಕೀಯಸುದ್ದಿ

ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶ್‌ಪಾಲ್‌ ಎ. ಸುವರ್ಣ ನಾಮಪತ್ರ ಸಲ್ಲಿಕೆ, ಬೃಹತ್ ಪಾದಯಾತ್ರೆ ; ಶಾಸಕ ಕೆ. ರಘುಪತಿ ಭಟ್‌ ಸಾಥ್ – ಕಹಳೆ ನ್ಯೂಸ್

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶ್‌ಪಾಲ್‌ ಎ. ಸುವರ್ಣ ಅವರು ಗುರುವಾರ ಅಪಾರ ಸಂಖ್ಯೆಯ ಬಿಜೆಪಿ ಕಾರ್ಯಕರ್ತರೊಂದಿಗೆ ಪಾದಯಾತ್ರೆ ಮೂಲಕ ತಾಲೂಕು ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಶ್ರೀ ಕೃಷ್ಣಮಠದಲ್ಲಿ ಪೂಜೆ ಸಲ್ಲಿಸಿ, ಗೋವುಗಳಿಗೆ ವಿಶೇಷ ಪೂಜೆ ಸಲ್ಲಿಸಿದರು.

ಮಲ್ಪೆ ಅಯ್ಯಪ್ಪ ಸ್ವಾಮಿ ಮಂದಿರ, ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಹಿರಿಯ ಮುಖಂಡ ಸೋಮಶೇಖರ ಭಟ್‌ ಮನೆಗೆ ತೆರಳಿ ಆಶೀರ್ವಾದ ಪಡೆದು ಬಿಜೆಪಿ ಕಚೇರಿಯಲ್ಲಿ ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಹಾಗೂ ದಿ| ಡಾ| ವಿ.ಎಸ್‌. ಆಚಾರ್ಯ ಭಾವಚಿತ್ರಕ್ಕೆ ನಮಿಸಿ, ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಪಾದಯಾತ್ರೆ ಬಿಜೆಪಿ ಕಚೇರಿಯಿಂದ ಆರಂಭವಾಗಿ ಕಡಿಯಾಳಿ, ಕಲ್ಸಂಕ, ಸಿಟಿಬಸ್‌ ನಿಲ್ದಾಣ, ಬನ್ನಂಜೆಯಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮತ್ತು ಬ್ರಹ್ಮಶ್ರೀ ನಾರಾಯಣಗುರು ಮಂದಿರಕ್ಕೆ ಭೇಟಿ ನೀಡಿ ವಿಶೇಷ ಪಾರ್ಥನೆ ಸಲ್ಲಿಸಿದರು. ಪಾದಯಾತ್ರೆ ತಾಲೂಕು ಕಚೇರಿವರೆಗೆ ಸಾಗಿತು. ಚಂಡೆ ಬಳಗ, ನಾಸಿಕ್‌ ಬ್ಯಾಂಡ್‌ ಇತ್ಯಾದಿ ಪಾದಯಾತ್ರೆಗೆ ಮೆರಗು ನೀಡಿದವು.

ಯಶ್‌ಪಾಲ್‌ ಎ.ಸುವರ್ಣ ಚುನಾವಣಾಧಿಕಾರಿ ಸೀತಾ ಎಂ.ಸಿ. ಅವರಿಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಶಾಸಕ ಕೆ. ರಘುಪತಿ ಭಟ್‌, ನಗರ ಬಿಜೆಪಿ ಅಧ್ಯಕ್ಷ ಮಹೇಶ್‌ ಠಾಕೂರ್‌, ಗ್ರಾಮಾಂತರ ಅಧ್ಯಕ್ಷೆ ವೀಣಾ ನಾಯ್ಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್‌ ಎಸ್‌.ಕಲ್ಮಾಡಿ ಜತೆಗಿದ್ದರು.