ಕಳೆದ 5 ವರ್ಷಗಳಲ್ಲಿ 2095 ಕೋ.ರೂ. ಅನುದಾನದಿಂದ ಬಂಟ್ವಾಳದ ಸಮಗ್ರ ಅಭಿವೃದ್ಧಿ ಕಾರ್ಯ : ಬಿಜೆಪಿ ಅಭ್ಯರ್ಥಿ, ಶಾಸಕ ರಾಜೇಶ್ ನಾೖಕ್ – ಕಹಳೆ ನ್ಯೂಸ್
ಬಂಟ್ವಾಳ: ಕಳೆದ 5 ವರ್ಷಗಳಲ್ಲಿ ಬಂಟ್ವಾಳ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಸುಮಾರು 2095 ಕೋ.ರೂ.ಗಳ ಅನುದಾನದ ಅಭಿವೃದ್ಧಿ ಕಾರ್ಯ ಅನುಷ್ಠಾನಗೊಳಿಸಲಾಗಿದ್ದು, ಬಂಟ್ವಾಳವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸಲು ಹಲವು ಯೋಜನೆಗಳ ಅನುಷ್ಠಾನಕ್ಕೆ ಕ್ಷೇತ್ರದ ಮತದಾರರು ಮತ್ತೂಮ್ಮೆ ಆಶೀರ್ವಾದ ಮಾಡಬೇಕು ಎಂದು ಬಂಟ್ವಾಳ ಬಿಜೆಪಿ ಅಭ್ಯರ್ಥಿ, ಶಾಸಕ ರಾಜೇಶ್ ನಾೖಕ್ ಉಳಿಪ್ಪಾಡಿಗುತ್ತು ಹೇಳಿದರು.
ಅವರು ಬಂಟ್ವಾಳ ಕ್ಷೇತ್ರದ ಹಲವು ಗ್ರಾಮಗಳಲ್ಲಿ ಮನೆ ಮನೆ ಭೇಟಿಯ ಮೂಲಕ ಮತಯಾಚನೆ ನಡೆಸಿ ಕಾರ್ಯಕರ್ತರ ಸಭೆಯಲ್ಲಿ ಮಾತ ನಾಡಿದರು. ನಾನು ಶಾಸಕನಾಗುವ ಮೊದಲು ಬಂಟ್ವಾಳದಲ್ಲಿ ಬರೀ ಕೋಮು ಗಲಭೆಗಳು, ಹತ್ಯೆಗಳು, ಇನ್ನಿತರ ಅಹಿತಕರ ಘಟನೆಗಳು ಮರುಕಳಿಸುತ್ತಲೇ ಇತ್ತು. ಹೀಗಾಗಿ ತಾನು ಶಾಸಕನಾದರೆ ಶಾಂತಿಯ ಬಂಟ್ವಾಳವನ್ನು ನಿರ್ಮಾಣ ಮಾಡಬೇಕು ಎಂಬ ಪಣತೊಟ್ಟಿದ್ದು, ಅದರಂತೆ ಕಳೆದ 5 ವರ್ಷಗಳಿಂದ ಒಂದೇ ಒಂದು ಕೋಮುಗಲಭೆ, ಕೊಲೆಗಳು ನಡೆಯದೆ ಶಾಂತಿಯ ಬಂಟ್ವಾಳ ನಿರ್ಮಾಣವಾಗಿದೆ. ಗ್ರಾಮೀಣ ಭಾಗಗಳಿಗ ತೆರಳಿದ ಸಂದರ್ಭ ಕ್ಷೇತ್ರದ ಜನತೆ ಇದೇ ಮಾತನ್ನು ಹೇಳಿ ಮತ್ತೂಮ್ಮೆ ಗೆಲ್ಲಿಸುವ ಭರವಸೆ ನೀಡುತ್ತಿದ್ದಾರೆ.
ಆರೋಗ್ಯ ಕ್ಷೇತ್ರಕ್ಕೆ ಆದ್ಯತೆ ನೀಡಿ ಕೋವಿಡ್ ಸಂದರ್ಭದಲ್ಲಿ ಜಿಲ್ಲೆಯ ಪ್ರಥಮ ಆಕ್ಸಿಜನ್ ಘಟಕ ವಾಮದಪದವು, ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಅನುಷ್ಠಾನಗೊಂಡಿದೆ. ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ 25 ಐಸಿಯು ಬೆಡ್, ಪ್ರತಿನಿತ್ಯ 70 ಮಂದಿಗೆ ಡಯಾಲಿಸಿಸ್ ವ್ಯವಸ್ಥೆ ಕಾರ್ಯಾಚರಿಸುತ್ತಿದೆ. ಪುಂಜಾಲ ಕಟ್ಟೆ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆ ಗೇರಿಸಿ ಈಗಾಗಲೇ 12.44 ಕೋ.ರೂ. ಗಳ ಕಾಮಗಾರಿಗೆ ಶಿಲಾನ್ಯಾಸ ನೆರ ವೇರಿಸಲಾಗಿದೆ.
ಶಿಕ್ಷಣಕ್ಕೆ ಸಂಬಂಧಿಸಿ ಎಲ್ಲ ಸರಕಾರಿ ಶಾಲಾ- ಕಾಲೇಜುಗಳಿಗೆ ಆದ್ಯತೆಯ ನೆಲೆಯಲ್ಲಿ ಮೂಲಸೌಕರ್ಯ ಒದಗಿ ಸಲಾಗಿದ್ದು, ಬಂಟ್ವಾಳ ಪಾಲಿಟೆಕ್ನಿಕ್‌ಗೆ 5 ಕೋ.ರೂ.ಗಳ ಅನುದಾನ ನೀಡಲಾಗಿದೆ. ಜಿಲ್ಲೆಯಲ್ಲೇ ಮೊದಲ ಬ್ರಹ್ಮಶ್ರೀ ನಾರಾಯಣ ಗುರು ವಸತಿ ಶಾಲೆ ಪುಂಜಾಲಕಟ್ಟೆಯಲ್ಲಿ ಆರಂಭ ಗೊಂಡಿದ್ದು, ಅದರ ಅನುಷ್ಠಾನಕ್ಕೆ 29 ಕೋ.ರೂ. ಅನುದಾನ ಮಂಜೂ ರಾಗಿದೆ. ನೇತ್ರಾವತಿ ನದಿಗೆ ಅಡ್ಡಲಾಗಿ ಜಕ್ರಿಬೆಟ್ಟುನಲ್ಲಿ 135 ಕೋ.ರೂ.ಗಳ ಸೇತುವೆ ಸಹಿತ ಕಿಂಡಿ ಅಣೆಕಟ್ಟು ಕಾಮಗಾರಿ ನಡೆಯುತ್ತಿದ್ದು, ಕ್ಷೇತ್ರದಲ್ಲಿ 34 ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣವಾಗಿದೆ. ಬಾಳ್ತಿಲ ಗ್ರಾಮದಲ್ಲಿ ಏತ ನೀರಾವರಿಗಾಗಿ 125 ಕೋ.ರೂ.ಗಳ ಯೋಜನೆ ಮಂಜೂರಾಗಿದ್ದು, ಶೀಘ್ರ ಕಾಮಗಾರಿ ಆರಂಭಗೊಳ್ಳಬೇಕಿದೆ. ಬಿ.ಸಿ. ರೋಡು ನಗರ ಸೌಂದರ್ಯ ಯೋಜನೆ ಯಾಗಿ 5 ಕೋ.ರೂ.ಗಳ ಕಾಮಗಾರಿ ಪೂರ್ಣಗೊಂಡಿದೆ ಎಂದರು.
ಅನಂತಾಡಿ- ಬಂಟ್ರಿಂಜ- ಉಳ್ಳಾಲ್ತಿ ಮಾಡ ರಸ್ತೆಗೆ 2 ಕೋ.ರೂ. ಮಂಜೂರಾಗಿದ್ದು, ಮಾಣಿ ಶ್ರೀ ಉಳ್ಳಾಲ್ತಿ ಕ್ಷೇತ್ರದ ರಸ್ತೆಯ ರೀತಿಯಲ್ಲೇ ಮಾದರಿ ರಸ್ತೆಯಾಗಿ ಮೇಲ್ದರ್ಜೆ ಗೇರಿಸಲಾಗುತ್ತದೆ. ಕಳ್ಳಿಗೆ, ಅಮ್ಮುಂಜೆ, ಕರಿಯಂಗಳ ಗ್ರಾಮಗಳಿಗೆ 26.50 ಕೋ.ರೂ.ಗಳ ಕುಡಿಯುವ ನೀರಿನ ಯೋಜನೆ ಪ್ರಗತಿಯಲ್ಲಿದೆ ಎಂದರು.
ಈ ಸಂದರ್ಭದಲ್ಲಿ ಬಂಟ್ವಾಳ ಕ್ಷೇತ್ರ ಬಿಜೆಪಿ ಪ್ರಮುಖರು, ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರಗಳ ಪ್ರಮುಖರು, ಕಾರ್ಯಕರ್ತರು ಪಾಲ್ಗೊಂಡಿದ್ದರು.
ದಾಖಲೆಯ 1,514 ರಸ್ತೆ
ಬಂಟ್ವಾಳ ಕ್ಷೇತ್ರದ ಇತಿಹಾಸದಲ್ಲೇ ದಾಖಲೆ ಎಂಬಂತೆ 1,514 ರಸ್ತೆಗಳ ನಿರ್ಮಾಣವಾಗಿದ್ದು, 318 ಧಾರ್ಮಿಕ ಕ್ಷೇತ್ರಗಳಿಗೆ ಸಂಪರ್ಕ ರಸ್ತೆ ಸೇರಿದಂತೆ ಮೂಲಸೌಕರ್ಯ ಒದಗಿಸುವ ಕಾರ್ಯ ಮಾಡಲಾಗಿದೆ. ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಗೆ ಅಮೃತ್-2ನಲ್ಲಿ 40.16 ಕೋ.ರೂ, ಒಳಚರಂಡಿ ವ್ಯವಸ್ಥೆಗೆ 56.54 ಕೋ.ರೂ.ಗಳ ಅನುದಾನ ಮಂಜೂರು ಮಾಡಲಾಗಿದೆ ಎಂದು ರಾಜೇಶ್ ನಾೖಕ್ ಅವರು ವಿವರಿಸಿದರು.