Tuesday, January 21, 2025
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಅಲಿ – ಬಾವಾ ಮುಖಾಮುಖಿ ; ಪರಸ್ಪರ ಅಭ್ಯರ್ಥಿಗಳ ಪರ ಮೊಳಗಿದ ಘೋಷಣೆ – ಕಹಳೆ ನ್ಯೂಸ್

ಮಂಗಳೂರು: ನಗರದ ಮಿನಿವಿಧಾನಸೌಧ ಬಳಿ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಮುಖಾಮುಖಿಯಾಗಿ ಪರಸ್ಪರ ಅಭ್ಯರ್ಥಿಗಳ ಪರ ಘೋಷಣೆ ಮೊಳಗಿಸಿದ ಘಟನೆ ಗುರುವಾರ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರಸ್ ಅಭ್ಯರ್ಥಿ ಇನಾಯತ್ ಅಲಿ ಅವರು ನಾಮಪತ್ರ ಸಲ್ಲಿಕೆಗೆ ಮಿನಿವಿಧಾನಸೌಧಕ್ಕೆ‌ಆಗಮಿಸಿದರು.

ಇದೇ ವೇಳೆ ಜೆಡಿಎಸ್ ಪಕ್ಷದಿಂದ ಮೊಯ್ದಿನ್ ಬಾವಾ ನಾಮಪತ್ರ ಸಲ್ಲಿಕೆ ವಿಷಯ ತಿಳಿದು ಜೆಡಿಎಸ್ ಕಾರ್ಯಕರ್ತರು ಕೂಡ ಆಗಮಿಸಿದ್ದರು. ಪರಸ್ಪರ ಘೋಷಣೆ ಕೂಗಿದ ಘಟನೆ ನಡೆಯಿತು.

ಮಾಜಿ ಶಾಸಕ ಮೊಯ್ದಿನ್ ಬಾವಾ ಅವರು ಕಾಂಗ್ರೆಸ್ ಟಿಕೆಟ್ ನ ಪ್ರಬಲ ಆಕಾಂಕ್ಷಿಯಾಗಿದ್ದರು. ಕೊನೆ ಕ್ಷಣದಲ್ಲಿ ಕಾಂಗ್ರೆಸ್ ಇನಾಯತ್ ಅಲಿ ಅವರಿಗೆ ಟಿಕೆಟ್ ನೀಡಿತ್ತು. ತೀವ್ರ ಆಕ್ರೋಶಗೊಂಡಿದ್ದ ಬಾವಾ ಜೆಡಿಎಸ್ ಸೇರ್ಪಡೆಯಾಗಿ ಕಣಕ್ಕಿಳಿದಿದ್ದಾರೆ.