Monday, January 20, 2025
ಸುದ್ದಿ

ಇಂದಿನಿ0ದ ರಾಜ್ಯದ ಹಲವು ಜಿಲ್ಲೆಗಳಲ್ಲಿ 5 ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ –ಕಹಳೆ ನ್ಯೂಸ್

ಇಂದಿನಿ0ದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 21 ರಿಂದ ಏಪ್ರಿಲ್ 25 ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಉತ್ತರ ಒಳನಾಡಿನ ಬೆಳಗಾವಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಇಂದಿನಿAದ 5 ದಿನ ಮಳೆಯಾಗಲಿದೆ. ಏಪ್ರಿಲ್ 21, 22 ಮತ್ತು 25 ರಂದು ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಏ.23 ರಿಂದ ಏ.25 ರವರೆಗೆ ಕೊಪ್ಪಳ ಮತ್ತು ಯಾದಗಿರಿಯಲ್ಲಿ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಬಳ್ಳಾರಿ, ಚಾಮರಾಜನಗರ, ಕೋಲಾರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಏಪ್ರಿಲ್ 23 ರಿಂದ ಏಪ್ರಿಲ್ 25 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.