Recent Posts

Monday, January 20, 2025
ಸುದ್ದಿ

ಗಣೇಶ ವಿಸರ್ಜನೆ ವೇಳೆ ಭಜರಂಗದಳದ ತಾಲೂಕು ಸಂಚಾಲಕ ದುರ್ಮರಣ – ಕಹಳೆ ನ್ಯೂಸ್

ದಾವಣಗೆರೆ: ಗಣಪತಿ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಗೆ ವಿದ್ಯುತ್ ತಗುಲಿದ ಪರಿಣಾಮ ಭಜರಂಗ ದಳದ ತಾಲೂಕು ಸಂಚಾಲಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹರಪನಹಳ್ಳಿ ಪಟ್ಟಣದಲ್ಲಿ ನಡೆದಿದೆ.

ಹರಪನಹಳ್ಳಿ ನಿವಾಸಿ ಭಜರಂಗಿ ಹನುಮಂತು (27) ಮೃತಪಟ್ಟ ದುರ್ದೈವಿ. ಭಾನುವಾರ ರಾತ್ರಿ ಪಟ್ಟಣದ ಹಿಂದೂ ಮಹಾ ಗಣಪತಿ ವಿಸರ್ಜನೆಯನ್ನು ಅದ್ಧೂರಿಯಾಗಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮೆರವಣಿಗೆ ಮುಗಿಸಿ ತಡರಾತ್ರಿ 11 ಸುಮಾರಿಗೆ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡಲು ಹೋಗುತ್ತಿರುವಾಗ ಮಿನಿ ವಿಧಾನಸೌಧದ ಬಳಿ ಟ್ರ್ಯಾಕ್ಟರ್ ಗೆ ವಿದ್ಯುತ್ ತಂತಿ ತಗುಲಿದೆ. ಕೂಡಲೇ ಟ್ರಾಕ್ಟರ್ ನಲ್ಲಿದ್ದ ಹಲವರು ಕೆಳಗಿಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಹನುಮಂತು ಇಳಿಯುವ ಹೊತ್ತಿಗೆ ಟ್ರಾಕ್ಟರ್ ಗೆ ವಿದ್ಯುತ್ ಸ್ಪರ್ಶಿಸಿದ್ದರಿಂದ ತೀವ್ರವಾಗಿ ಅಸ್ವಸ್ಥಗೊಂಡಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕೂಡಲೇ ಸಂಘಟನೆಯ ಯುವಕರು ಹನುಮಂತುರವರನ್ನು ಆಸ್ಪತ್ರೆಗೆ ಸಾಗಿಯಲು ಯತ್ನಿಸಿದಾದರೂ ಮಾರ್ಗಮಧ್ಯೆಯೇ ಅಸುನೀಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು