Monday, January 20, 2025
ಉಡುಪಿರಾಜಕೀಯಸುದ್ದಿ

ಉಡುಪಿ ಬಿಜೆಪಿ ಅಭ್ಯರ್ಥಿಯಾಗಿ ಯಶ್‌ಪಾಲ್ ನಾಮಪತ್ರ ಸಲ್ಲಿಕೆ; ಪಾದಯಾತ್ರೆಯಲ್ಲಿ ಸಾಗಿ ಬಂದ ಯಶ್‌ಪಾಲ್ – ಕಹಳೆ ನ್ಯೂಸ್

ಉಡುಪಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಎ. ಸುವರ್ಣ ಅವರು ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾದ ನಿನ್ನೆ ಸಹಸ್ರ ಸಂಖ್ಯೆಯ ಕಾರ್ಯಕರ್ತರೊಂದಿಗೆ ಶಾಸಕ ಕೆ. ರಘುಪತಿ ಭಟ್ ಸಮೇತರಾಗಿ ಜಿಲ್ಲಾ ಬಿಜೆಪಿ ಕಚೇರಿಯಿಂದ ಪಾದಯಾತ್ರೆ ಮೂಲಕ ತಾಲೂಕು ಕಚೇರಿಗೆ ಕ್ರಮಿಸಿ ನಾಮಪತ್ರ ಸಲ್ಲಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬೆಳಗ್ಗೆ ಶ್ರೀ ಕೃಷ್ಣಮಠದಲ್ಲಿ ದೇವರ ದರ್ಶನ ಪಡೆದು, ಗೋಶಾಲೆಯಲ್ಲಿ ಗೋವುಗಳಿಗೆ ವಿಶೇಷ ಪೂಜೆ ಸಲ್ಲಿಸಿದರು. ಮಲ್ಪೆಯ ಅಯ್ಯಪ್ಪ ಸ್ವಾಮಿ ಮಂದಿರ, ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಹಿರಿಯ ಮುಖಂಡ ಸೋಮಶೇಖರ ಭಟ್ ಮನೆಗೆ ತೆರಳಿ ಆಶೀರ್ವಾದ ಪಡೆದು ಬಿಜೆಪಿ ಕಚೇರಿಯಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ದಿ| ಡಾ| ವಿ.ಎಸ್. ಆಚಾರ್ಯ ಭಾವಚಿತ್ರಕ್ಕೆ ನಮಿಸಿ, ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡರು.