ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿಯವರು ಚುನಾವಣೆಯ ಪೂರ್ವ ಸಿದ್ಧತಾ ಸಭೆಯನ್ನು ಕಾವೂರು 2 ಶಕ್ತಿ ಕೇಂದ್ರದ ಅಧ್ಯಕ್ಷ ಶ್ರೀ ರಾಘವೇಂದ್ರ ಉಡುಪರ ಮನೆಯಲ್ಲಿ ನಡೆಸಿದರು.
ಈ ಸಂದರ್ಭದಲ್ಲಿ ಮಹಾಶಕ್ತಿ ಕೇಂದ್ರ ಪ್ರಮುಖರು, ಶಕ್ತಿ ಕೇಂದ್ರ ಪ್ರಮುಖರು, ಬೂತ್ ಅಧ್ಯಕ್ಷರುಗಳು, ಪಕ್ಷದ ವಿವಿಧ ಜವಾಬ್ದಾರಿ ಹೊಂದಿರುವ ಪದಾಧಿಕಾರಿಗಳು, ಕಾರ್ಯಕರ್ತರು, ಪ್ರಮುಖರು, ಉಪಸ್ಥಿತರಿದ್ದರು.