ದ್ವಿತೀಯ ಪಿಯುಸಿ ಫಲಿತಾಂಶ ; ವಾಣಿಜ್ಯ ವಿಭಾಗದಲ್ಲಿ ಆಳ್ವಾಸ್ ಮೂಡಬಿದಿರೆ ವಿದ್ಯಾರ್ಥಿನಿ ಅನನ್ಯಾ ರಾಜ್ಯಕ್ಕೆ ಪ್ರಥಮ ರ್‍ಯಾಂಕ್ – ಕಹಳೆ ನ್ಯೂಸ್
ದಕ್ಷಿಣ ಕನ್ನಡ : 2022–23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಪಿಯು ಮಂಡಳಿ ನಿರ್ದೇಶಕರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಆಳ್ವಾಸ್ ಮೂಡಬಿದಿರೆ ವಿದ್ಯಾರ್ಥಿನಿ ಅನನ್ಯಾ ರಾಜ್ಯಕ್ಕೆ ಪ್ರಥಮ ರ್‍ಯಾಂಕ್ ಪಡೆದುಕೊಂಡಿದ್ದಾರೆ.
https://karresults.nic.in ವೆಬ್‌ಸೈಟ್‌ನಲ್ಲಿ ವಿದ್ಯಾರ್ಥಿಗಳು ಹಾಲ್ ಟಿಕೆಟ್ ನಂಬರ್ ಹಾಗೂ ಜನ್ಮ ದಿನಾಂಕ ನಮೂದಿಸಿ ಫಲಿತಾಂಶ ವೀಕ್ಷಿಸಬಹುದು.
ರಾಜ್ಯದಲ್ಲಿ ಪ್ರಥಮ ರ್‍ಯಾಂಕ್ ಪಡೆದವರ ವಿವರ:
ಕಲಾ ವಿಭಾಗ : ತಬಸುಮ್ ಶೇಕ್, ಜಯನಗರ ಬೆಂಗಳೂರು
ವಾಣಿಜ್ಯ ವಿಭಾಗ: ಅನನ್ಯಾ, ಆಳ್ವಾಸ್ ಮೂಡಬಿದಿರೆ
ವಾಣಿಜ್ಯ ವಿಭಾಗ: ಕೌಶಿಕ್
ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಲಾ ವಿಭಾಗದಲ್ಲಿ ಶೇ.61.22, ವಾಣಿಜ್ಯ ವಿಭಾಗದಲ್ಲಿ ಶೇ.75.89, ವಿಜ್ಞಾನ ವಿಭಾಗದಲ್ಲಿ ಶೇ.85.71 ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆ(ಶೇ.95) ಪ್ರಥಮ ಸ್ಥಾನ ಪಡೆದುಕೊಂಡಿದೆ. ಉಡುಪಿ ದ್ವಿತೀಯ, ಕೊಡಗು ತೃತೀಯ ಮತ್ತು ಉತ್ತರ ಕನ್ನಡ ನಾಲ್ಕನೇ ಸ್ಥಾನ ಪಡೆದಿದೆ. ಯಾದಗಿರಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ.ಮಾ.9ರಿಂದ 29ರವರೆಗೆ ರಾಜ್ಯದ 1,109 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದವು. ಒಟ್ಟು 7,27,387 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದರು.