Thursday, January 23, 2025
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ಚುನಾವಣೆಗೂ ಮುನ್ನ ರಾಜ್ಯಕ್ಕೆ ಮತ್ತೆ ಮೋದಿ ; ಏಪ್ರಿಲ್ 30ರಂದು ಕೋಲಾರ, ಚನ್ನಪಟ್ಟಣದಲ್ಲಿ ಸಮಾವೇಶ – ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಬೃಹತ್ ಪ್ರಚಾರ ಸಭೆ ಬಿಜೆಪಿ ಮಾಸ್ಟರ್ ಫ್ಲಾನ್ – ಕಹಳೆ ನ್ಯೂಸ್

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಹಳೇ ಮೈಸೂರು ಭಾಗವನ್ನು ಟಾರ್ಗೆಟ್‌ ಮಾಡಿರುವ ಬಿಜೆಪಿ (BJP) ಮೋದಿ ಮೂಲಕ ಮತ ಕಬ್ಜಕ್ಕೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಹೆಚ್‍ಡಿಕೆ (HD Kumaraswamy) ಅಡ್ಡಾಗೆ ಪ್ರಧಾನಿ ಮೋದಿ (Narendra Modi) ಕರೆತರುವ ಮೂಲಕ ಜೆಡಿಎಸ್ (JDS) ಭದ್ರಕೋಟೆಯನ್ನು ಛಿದ್ರ ಮಾಡಲು ಬಿಜೆಪಿ ಮಾಸ್ಟರ್ ಫ್ಲಾನ್ ಮಾಡಿದೆ. ಬೊಂಬೆನಗರಿ ಚನ್ನಪಟ್ಟಣದಲ್ಲಿ ಬೃಹತ್ ಪ್ರಚಾರ ಸಭೆ ಆಯೋಜಿಸಲು ಸಿದ್ಧತೆ ನಡೆಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ (Election) ಹಳೆ ಮೈಸೂರು ಭಾಗದ ಕ್ಷೇತ್ರಗಳ ಮೇಲೆ ಬಿಜೆಪಿ ಕಣ್ಣಿಟ್ಟಿದೆ. ಅದರ ಮುಂದುವರಿದ ಭಾಗವಾಗಿ ಮಂಡ್ಯ, ರಾಮನಗರ ಜಿಲ್ಲೆಗಳನ್ನೊಳಗೊಂಡಂತೆ 10ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಕೇಂದ್ರೀಕರಿಸಿ ಏ. 30ರಂದು ಚನ್ನಪಟ್ಟಣದಲ್ಲಿ ಬೃಹತ್ ಬಹಿರಂಗ ಸಮಾವೇಶ ಆಯೋಜನೆಗೆ ಬಿಜೆಪಿ ಸಿದ್ಧತೆ ನಡೆಸಿದೆ. ಸುಮಾರು 2 ಲಕ್ಷಕ್ಕೂ ಅಧಿಕ ಜನರನ್ನು ಸೇರಿಸುವ ಮೂಲಕ ಜೆಡಿಎಸ್ ಭದ್ರಕೋಟೆಯಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ ನಡೆಸಲಿದೆ. ಈ ಬೃಹತ್ ಸಮಾವೇಶಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಎದುರು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸ್ಪರ್ಧೆ ಮಾಡಿರುವ ಹಿನ್ನಲೆಯಲ್ಲಿ ಮೋದಿ ಆಗಮನ ಸಿಪಿವೈಗೆ ಮತ್ತಷ್ಟು ಬಲನೀಡಲಿದೆ. ಈ ಮೂಲಕ ಹೆಚ್‍ಡಿಕೆ ಮಣಿಸುವ ಕಾರ್ಯತಂತ್ರವನ್ನು ಬಿಜೆಪಿ ಮಾಡುತ್ತಿದೆ. ಅಲ್ಲದೇ ಮೋದಿ ಮೂಲಕ ಹಿಂದೂ ಮತಗಳ ಕ್ರೂಢೀಕರಿಸಿ ಚನ್ನಪಟ್ಟಣದಲ್ಲಿ ಕಮಲ ಅರಳಿಸಲು ಬಿಜೆಪಿ ನಾಯಕರು ಸಜ್ಜಾಗಿದ್ದಾರೆ.

ಪ್ರಧಾನಿ ಮೋದಿ ಬಹಿರಂಗ ಸಮಾವೇಶಕ್ಕೆ ಚನ್ನಪಟ್ಟಣದ ಹೊರವಲಯದಲ್ಲಿ ಸುಮಾರು 30 ಎಕರೆ ಪ್ರದೇಶದಲ್ಲಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ ಆರಂಭವಾಗಿದೆ. ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಮೋದಿ ಆಗಮನದಿಂದ ಹಳೇ ಮೈಸೂರು ಭಾಗದ ಬಿಜೆಪಿ ಮತ್ತಷ್ಟು ಬಲಿಷ್ಠಗೊಳ್ಳಲಿದೆ ಎಂದು ಸಿ.ಪಿ ಯೋಗೇಶ್ವರ್ ಹೇಳಿದ್ದಾರೆ