Tuesday, April 22, 2025
ಉಡುಪಿರಾಜಕೀಯರಾಜ್ಯಸುದ್ದಿ

ಉಡುಪಿ ಬಿಜೆಪಿ ಕಚೇರಿಯಲ್ಲಿ ಚುನಾವಣ ನಿರ್ವಹಣ ತಂಡದೊಂದಿಗೆ ಬಿ.ಎಲ್.ಸಂತೋಷ್ ಸಭೆ – ಕಹಳೆ ನ್ಯೂಸ್

ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ರವಿವಾರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಚುನಾವಣ ನಿರ್ವಹಣ ಸಮಿತಿಯ ಸಭೆ ನಡೆಸಿ ಜಿಲ್ಲೆಯ ಎಲ್ಲ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ಗೆಲುವಿನ ಅಂತರ ಹೆಚ್ಚಳಕ್ಕೆ ಬೇಕಿರುವ ಕ್ರಮ ಮತ್ತು ತುರ್ತಾಗಿ ಆಗಬೇಕಿರುವ ಕಾರ್ಯಗಳ ಬಗ್ಗೆ ಮಾಹಿತಿ ನೀಡಿ, ಕೆಲವೊಂದು ವಿಭಾಗದಲ್ಲಿ ಸರಿಯಾಗಿ ಕಾರ್ಯನಿರ್ವಹಣೆ ಆಗದಿರುವ ಬಗ್ಗೆ ಸೂಚನೆ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಜಿಲ್ಲೆಯ ಪ್ರಮುಖರಿಂದ ವಿಧಾನಸಭಾ ಕ್ಷೇತ್ರವಾರು ಯುವ ಮತದಾರರು, ಮಹಿಳಾ ಮತದಾರರು, ಜಾತಿವಾರು ಮತದಾರರ ಮಾಹಿತಿಯನ್ನು ಪಡೆದರು. ಚುನಾವಣೆ ಎದುರಿಸಲು ಅಂತಿಮ ಹಂತದಲ್ಲಿ ಮಾಡಬೇಕಾದ ಕೆಲವೊಂದು ತುರ್ತು ಕಾರ್ಯಗಳ ಬಗ್ಗೆ ಸೂಚನೆ ನೀಡಿದರು.

ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ, ಶಾಸಕ ಕೆ ರಘುಪತಿ ಭಟ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮನೋಹರ್ ಕಲ್ಮಾಡಿ, ನವೀನ್ ಶೆಟ್ಟಿ ಕುತ್ಯಾರು, ಸದಾನಂದ ಉಪ್ಪಿನ ಕುದ್ರು, ಜಿಲ್ಲಾ ವಕ್ತಾರ ರಾಘವೇಂದ್ರ ಕಿಣಿ ಸಹಿತ ಚುನಾವಣ ನಿರ್ವಹಣ ತಂಡದ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ