Thursday, January 23, 2025
ಮೂಡಬಿದಿರೆರಾಜಕೀಯಸುದ್ದಿ

ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಅವರ ನೇತೃತ್ವದಲ್ಲಿ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ ಪರ ಚುನಾವಣಾ ಪ್ರಚಾರ – ಕಹಳೆ ನ್ಯೂಸ್

ಮೂಡಬಿದಿರೆ : ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ರವರ ನೇತೃತ್ವದಲ್ಲಿ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ ಪರವಾಗಿ ಭರ್ಜರಿ ಚುನಾವಣಾ ಪ್ರಚಾರ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಜಿಲ್ಲಾಧ್ಯಕ್ಷ ಸುದರ್ಶನ ಎಂ. ಅವರು ಕ್ಷೇತ್ರದ ಬೂತ್ ನಂಬ್ರ 63ರ ಜನತೆಯ ಮನೆ ಮನೆಗೆ ತೆರಳಿ ಉಮಾನಾಥ್ ಕೋಟ್ಯಾನ್ ಅವರನ್ನ ಈ ಬಾರಿ 50ಸಾವಿರ ಮತಗಳ ಅಂತರದಿಂದ ಗೆಲ್ಲಿಸಲು ಸಹಕರಿಸುವಂತೆ ಮತಯಾಚನೆ ಮಾಡಿದರು.

ಈ ಚುನಾವಣಾ ಪ್ರಚಾರ ಕಾರ್ಯದಲ್ಲಿ ಪುರಸಭೆ ಸದಸ್ಯ ರಾಜೇಶ್ ನಾಯಕ್, ಬೂತ್ ಅಧ್ಯಕ್ಷ ಆಕಾಶ್ ಸುವರ್ಣ, ಕಾರ್ಯದರ್ಶಿ ಅಭಿಷೇಕ್ ಹಾಗೂ ಬಿಜೆಪಿ ಕಾರ್ಯಕರ್ತರು ಸೇರಿದಂತೆ ಹಲವರು ಉಪಸ್ಥಿತರಿದ್ದರು.