Thursday, January 23, 2025
ಸುದ್ದಿ

ರಾಜ್ಯ ಬಿಜೆಪಿ ಒಬಿಸಿ ಮೋರ್ಚಾದ ಕಾರ್ಯದರ್ಶಿಯಾಗಿ ಗೋವಿಂದ ಬಾಬು ಪೂಜಾರಿ – ಕಹಳೆ ನ್ಯೂಸ್

ಉಡುಪಿ: ಬೈಂದೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ, ಸಾಮಾಜಿಕ ಕಾರ್ಯಕರ್ತರಾದ ಯುವ ಉದ್ಯಮಿಯಾದ ಬೈಂದೂರಿನ ಗೋವಿಂದ ಬಾಬು ಪೂಜಾರಿ ಇವರನ್ನು ರಾಜ್ಯ ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚ ಕಾರ್ಯದರ್ಶಿಯಾಗಿ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರ ಸೂಚನೆಯಂತೆ ಹಿಂದುಳಿದ ವರ್ಗ ರಾಜ್ಯ ಅಧ್ಯಕ್ಷರಾದ ನೆಲ ನರೇಂದ್ರಬಾಬು ನೇಮಕಾತಿ ಮಾಡಿ ಆದೇಶ ಹೊರಡಿಸಿರುತ್ತಾರೆ‍

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಗೋವಿಂದ ಬಾಬು ಪೂಜಾರಿ ನೇತೃತ್ವದಲ್ಲಿ ರಾಜ್ಯ ಓಬಿಸಿ ಮೋರ್ಚ ಮತ್ತಷ್ಟು ಬಲಿಷ್ಠಗೊಂಡು ಬಿಜೆಪಿಗೆ ಮತ್ತಷ್ಟು ಶಕ್ತಿ ನೀಡುವುದರ ಮುಖೇನ ಬೈಂದೂರಿನ ಬಿಜೆಪಿ ಅಭ್ಯರ್ಥಿಯ ವಿಜಯದ ಅಂತರ ಮತ್ತಷ್ಟು ಹೆಚ್ಚಲಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಆಶಿಸಿದರು.

ಹಾಗೂ ಈ ಸಂದರ್ಭದಲ್ಲಿ ಬಿಜೆಪಿ ಓಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಯಾಗಿ ನನ್ನ ಸೇವೆಯನ್ನು ಗುರುತಿಸಿ ನೇಮಕ ಮಾಡಿದ್ದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್, ಹಿಂದುಳಿದ ವರ್ಗಗಳ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ,ರಾಜ್ಯ ಓಬಿಸಿ ಮೋರ್ಚಾದ ಅಧ್ಯಕ್ಷರಾದ ನೆ.ಲ ನರೇಂದ್ರ ಬಾಬು ಮತ್ತು ಸಹಕರಿಸಿದ ಸರ್ವರಿಗೂ ಧನ್ಯವಾದಗಳನ್ನು ಗೋವಿಂದ ‌ಬಾಬು ಪೂಜಾರಿ ಅರ್ಪಿಸಿದರು.